ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ : ಹವಾಮಾನ ಇಲಾಖೆಯಿಂದ ಭಾರಿ ಮಳೆ ಬೀಳುವ ಮುನ್ಸೂಚನೆ
ಮಡಿಕೇರಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್ ಮತ್ತು ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕೊಡಗು ಜಿಲ್ಲೆಗೆ ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆಯು ಜುಲೈ 26ರ ಬೆಳಿಗ್ಗೆ 8.30ರವರೆಗೂ ಆರೆಂಜ್ ಅಲರ್ಟ್ ಘೋಷಿಸಿದ್ದು, ಮುನ್ನಚ್ಚರಿಕೆಯನ್ನೂ ನೀಡಿದೆ.








