ಜು.26 ರಂದು ವಿದ್ಯುತ್ ವ್ಯತ್ಯಯ
ಮಡಿಕೇರಿ : ವಿರಾಜಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್3 ಕೆಎಸ್ಆರ್ಟಿಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್ಗಳಲ್ಲಿ ಜುಲೈ, 26 ರಂದು 09.30 ರಿಂದ ಸಂಜೆ 5.00 ಗಂಟೆಯವರೆಗೆ ಸದರಿ ಫೀಡರ್ಗಳ ಬೇರ್ಪಡಿಸುವ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಈ ಫೀಡರ್ನಿಂದ ಹೊರಹೊಮ್ಮುವ ವಿರಾಜಪೇಟೆ ಪಟ್ಟಣದ ಮೀನುಪೇಟೆ, ಆರ್ಜಿ, ಬೇಟೋಳಿ, ಹೆಗ್ಗಳ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ, ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.








