ದಸರಾ ಸಮಿತಿಯಿಂದ ಪೇಟೆ ಶ್ರೀ ರಾಮಮಂದಿರದಲ್ಲಿ ವಿಶೇಷ ಪೂಜೆ
ಮಡಿಕೇರಿ : ಮಡಿಕೇರಿಯ ಐತಿಹಾಸಿಕ ದಸರಾ ಉತ್ಸವಾಚರಣೆಗೆ ಸಾಂಪ್ರದಾಯದಂತೆ ಮಡಿಕೇರಿ ನಗರ ದಸರಾ ಉತ್ಸವ ಸಮಿತಿ ವತಿಯಿಂದ ನಗರದ ಪೇಟೆ ಶ್ರೀರಾಮಮಂದಿರದಲ್ಲಿ ಪೂಜೆ ಸಲ್ಲಿಸುವ ಮೂಲಕ ಉತ್ಸವದ ಕಾರ್ಯಗಳಿಗೆ ಶನಿವಾರ ಚಾಲನೆ ನೀಡಲಾಯಿತು.
ಈ ಸಂದರ್ಭ ಮಡಿಕೇರಿ ನಗರ ದಸರಾ ಉತ್ಸವ ಸಮಿತಿಯ ನೂತನ ಕಾರ್ಯಧ್ಯಕ್ಷ ಅರುಣ್ ಕುಮಾರ್ ಮಾತನಾಡಿ, ಐತಿಹಾಸಿಕ ಮಡಿಕೇರಿ ದಸರಾಗೆ ಚಾಲನೆ ನೀಡಲಾಗಿದೆ. ಈ ಭಾರಿ ಕಾರ್ಯಧ್ಯಕ್ಷ ಸ್ಥಾನದ ಮಹತ್ವದ ಜವಾಬ್ದಾರಿ ಕೂಡ ನನ್ನ ಮೇಲಿದ್ದು, ಅಚ್ಚುಕಟ್ಟಾಗಿ ಮಾಡುವ ಗುರಿಯನ್ನು ಹೊಂದಲಾಗಿದೆ. ಈ ಭಾರಿಯ ದಸರಾಗೆ ಎಲ್ಲರ ಸಹಕಾರ ಕೂಡ ನಮಗೆ ಅಗತ್ಯ. ತಮ್ಮೆಲ್ಲರ ಸಹಕಾರದಿಂದ ಮಡಿಕೇರಿ ದಸರಾವನ್ನ ಬಹಳ ಅದ್ದೂರಿಯಾಗಿ ಆಚರಿಸೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ದಸರಾ ದಶಮಂಟಪ ಸಮಿತಿ ಅಧ್ಯಕ್ಷ ಹರೀಶ್ ಅಣ್ವೇಕರ್ ಸೇರಿದಂತೆ ದಶಮಂಟಪಗಳ ಸಮಿತಿ ಪದಾಧಿಕಾರಿಗಳು, ನಗರಸಭೆ ಸದಸ್ಯರು ಪಾಲ್ಗೊಂಡಿದ್ದರು.








