ಚನ್ನಯ್ಯನಕೋಟೆಯಲ್ಲಿ ಕಾರ್ಗಿಲ್ ವಿಜಯೋತ್ಸವ ಹಾಗೂ ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರ
ಮಡಿಕೇರಿ : ಸರ್ವ ಸಹಾಯಿ ಮಿತ್ರ ಮಂಡಳಿ ವತಿಯಿಂದ (ಜು 27) ರಂದು ಇಂದು ಕಾರ್ಗಿಲ್ ವಿಜಯೋತ್ಸವ, ಡಾ. ಎಪಿಜೆ ಅಬ್ದುಲ್ ಕಲಾಂ ಪುಣ್ಯ ಸ್ಮರಣೆ ಹಾಗೂ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸರ್ವಸಹಾಯಿ ಮಿತ್ರ ಮಂಡಳಿ ಅಧ್ಯಕ್ಷ ವಿಜು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಚೆನ್ನಯ್ಯನಕೋಟೆ ಗ್ರಾಮದಲ್ಲಿ ಕಳೆದ 11 ವರ್ಷಗಳಿಂದ ಯೋಧರಿಗೆ ನಮನ ಕಾರ್ಗಿಲ್ ವಿಜಯೋತ್ಸವ, ಡಾ ಎಪಿಜೆ ಅಬ್ದುಲ್ ಕಲಾಂ ಅವರ ಪುಣ್ಯಸ್ಮರಣೆ ಸೇರಿದಂತೆ ಯುದ್ಧದಲ್ಲಿ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಯೋಧರನ ಸ್ಮರಿಸುವ ಹಾಗೂ ಕುಟುಂಬವನ್ನ ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಎಲ್ಲಾ ಸಮಾಜದ ಬಾಂಧವರು, ವಿವಿಧ ಸಂಘ ಸಂಸ್ಥೆಯ ಮುಖಂಡರುಗಳು, ನಿವೃತ್ತ ಯೋಧರು, ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಸುತ್ತಮುತ್ತಲ ಗ್ರಾಮ ನಿವಾಸಿಗಳಿಗೆ ಮೈಸೂರಿನ ಅಲ್ ಅನ್ಸಾರ್ ಆಸ್ಪತ್ರೆಯ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದ್ದು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ವಿಜು ಮನವಿ ಮಾಡಿದರು
ಈ ಸಂದರ್ಭ ಉಪಾಧ್ಯಕ್ಷೆ ದೊಡ್ಡಮ್ಮ , ಪ್ರಧಾನ ಕಾರ್ಯದರ್ಶಿ ಇಂದಿರಾ ಮುರ್ಗೇಶ್, ಗೌರವಾಧ್ಯಕ್ಷ ಸಲೀಂ, ಗೌರವ ಸಲಹೆಗಾರ ಅಬ್ದುಲ್ ರಹಿಮಾನ್, ಖಜಾಂಚಿ ಶಶಿ ಅಚ್ಚುದನ್, ಸಂಘನಾ ಕಾರ್ಯದರ್ಶಿ ಮಾದೇವ, ಸ್ವಾಗತ ಸಮಿತಿ ಅಧ್ಯಕ್ಷರು ಬನೊಜ್, ಸನಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು








