ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ
ವಿರಾಜಪೇಟೆ : ಸಮೀಪದ ಬೇಟೋಳಿ ಗ್ರಾಮದ ರಾಮನಗರ ದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆವರಣದಲ್ಲಿರುವ ಶ್ರೀ ನಾಗ ದೇವರ ಗುಡಿಯಲ್ಲಿ ನಾಗರ ಪಂಚಮಿಯನ್ನು ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು.ಬೆಳಿಗ್ಗೆಯಿಂದಲೇ ಪೂಜಾ ಕಾರ್ಯಕ್ರಮಗಳು ದೇವಸ್ಥಾನದಲ್ಲಿ ನಡೆಯಿತು. ಅರ್ಚಕರು ಸಂಕಲ್ಪ ಪೂಜೆ ಹಾಗೂ ಪ್ರಾರ್ಥನೆ ಯನ್ನು ಮಾಡಿದರು. ತದನಂತರ ಅಲಂಕಾರ ಪೂಜೆ, ಕ್ಷೀರಾಭಿಷೇಕ, ಪಂಚಾಂಬ್ರುತ ಅಭಿಷೇಕ, ಕುಂಕುಮಾರ್ಚನೆ, ಸೀಯಾಳ ಅಭಿಷೇಕ ವು ಜರುಗಿತು. ಅರ್ಚಕರು ನಾಗ ತಂಬಿಲವನ್ನು ನೆರವೇರಿಸಿದರು. ಭಕ್ತಾದಿಗಳು ಈ ಸಂದರ್ಭದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ತದನಂತರ ಅರ್ಚಕರು ಮಹಾ ಪೂಜೆಯನ್ನು ಮಾಡಿದರು. ಭಕ್ತಾದಿಗಳಿಗೆ ಪ್ರಸಾದ ವಿತರಣೆ ಯು ಜರುಗಿತು. ಪೂಜಾ ಕಾರ್ಯಕ್ರಮಗಳು ದೇವಸ್ಥಾನದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ಹಾಗೂ ವಾಮನಮೂರ್ತಿ ಭಟ್ ರವರ ನೇತೃತ್ವದಲ್ಲಿ ನಡೆಯಿತು. ನೆರೆದಿದ್ದ ಭಕ್ತಾದಿಗಳಿಗೆ ಅನ್ನ ಸಂತರ್ಪಣಾ ಸೇವೆಯು ಜರುಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.








