Breaking News :

ಚನ್ನಯ್ಯನಕೋಟೆಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಚನ್ನಯ್ಯನಕೋಟೆಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಮಡಿಕೇರಿ : ಮಾನಸಿಕ ಒತ್ತಡ ಹಾಗೂ ದುಶ್ಚಟಗಳಿಂದ ದೂರವಿದ್ದು ಗುಣಮಟ್ಟದ ಆಹಾರ ಸೇವನೆ ಯೊಂದಿಗೆ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕೆಂದು ಮೈಸೂರು ಅಲ್ ಅನ್ಸರ್ ಆಸ್ಪತ್ರೆಯ ವೈದ್ಯ ಡಾ. ಜಾವೀದ್ ಸಲಹೆ ನೀಡಿದ್ದಾರೆ.

ಸರ್ವ ಸಹಾಯಿ ಮಿತ್ರ ಮಂಡಳಿ ವತಿಯಿಂದ ಚೆನ್ನ ಕೋಟೆಯಲ್ಲಿ ಕಾರ್ಗಿಲ್ ವಿಜಯೋತ್ಸವ ಹಾಗೂ ಡಾ. ಎಪಿಜೆ ಅಬ್ದುಲ್ ಕಲಾಂ ಪುಣ್ಯ ಸ್ಮರಣೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕ ಆಯೋಜಿಸಲಾಗಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಕಲಬೆರಿಕೆಯ ಜಿಂಕ್ ಫುಡ್ಗಳತ್ತ ಮುಖ ಮಾಡುತ್ತಿದ್ದು ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.

ಹೆಚ್ಚಿನ ಸಂಖ್ಯೆಯ ಯುವ ಸಮೂಹ ದುಶ್ಚಟಗಳಿಗೆ ಮಾರುಹೋಗುತ್ತಿದ್ದು ಸಮಾಜ ಸೇವಾ ಸಂಘಟನೆಗಳು ಆರೋಗ್ಯ ಮತ್ತು ಜಾಗೃತಿ ಶಿಬಿರಗಳನ್ನ ಆಯೋಜಿಸುವ ಮೂಲಕ ಆರೋಗ್ಯ ಕಾಳಜಿಯೊಂದಿಗೆ ಉತ್ತಮ ಭವಿಷ್ಯ ರೂಪಿಸಬೇಕಾಗಿದೆ ಪ್ರತಿಯೊಬ್ಬರು ಆರೋಗ್ಯ ತಪಾಸಣೆಯೊಂದಿಗೆ ಆರೋಗ್ಯ ಕಾಳಜಿಯ ಸಲಹೆಗಳನ್ನು ಮನವರಿಕೆ ಮಾಡಿಕೊಂಡು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದರು.

ಅಲ್ ಅನ್ಸರ್ ಆಸ್ಪತ್ರೆಯ ಶಿಬಿರ ಸಂಯೋಜಕ ಅಬ್ದುಲ್ ಕಲ್ಲಕ್ ಮಾತನಾಡಿ ಕಳೆದ 12 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಆಸ್ಪತ್ರೆಯಲ್ಲಿ ಎಲ್ಲಾ ತರಹದ ಅತ್ಯಾಧುನಿಕ ವೈದ್ಯಕೀಯ ಸೇವೆಯನ್ನು ನೀಡಲಾಗುತ್ತಿದ್ದು ಕಳೆದ ಏಳು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ನೂರಾರು ಸಿಬಿರಗಳನ್ನು ಆಯೋಜಿಸಲಾಗಿದ್ದು ಲಕ್ಷಾಂತರ ಜನರು ಶಿಬಿರದ ಪ್ರಯೋಜನ ಪಡೆದುಕೊಂಡಿದ್ದಾರೆ. ಗ್ರಾಮೀಣ ಭಾಗದ ಜನರ ಆರೋಗ್ಯದ ಕಾಳಜಿ ಬಗ್ಗೆ ಸರ್ವಸಹಾಯ ಮಿತ್ರ ಮಂಡಳಿ ಶಿಬಿರ ಆಯೋಜಿಸುವ ಮೂಲಕ ಸಮಾಜ ಸೇವೆಯನ್ನು ತೊಡಗಿಸಿಕೊಂಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಚನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೇಕೆರಿರ ಅರುಣ್ ಕುಮಾರ್ ಮಾತನಾಡಿ ಗ್ರಾಮದಲ್ಲಿರುವ ಸರ್ವಸಹಾಯ ಮಿತ್ರ ಮಂಡಳಿ ಹಲವು ವರ್ಷಗಳಿಂದ ದೇಶ ಅಭಿಮಾನದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು ದೇಶ ರಕ್ಷಣೆಗಾಗಿ ಪ್ರಾಣತ್ಯಾಗ ಮಾಡಿದ ಯೋಧರನ್ನು ಸ್ಮರಿಸುವುದರೊಂದಿಗೆ ಅವರ ಕುಟುಂಬವನ್ನು ಗೌರವಿಸುವ ಮೂಲಕ ಜಿಲ್ಲೆಯಲ್ಲಿಯೇ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದ್ದು ಇಂತಹ ಕಾರ್ಯಕ್ರಮಗಳಿಗೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದರ ಮೂಲಕ ದೇಶ ಸೇವೆಯಲ್ಲಿರುವ ಯೋಧರಿಗೆ ಸ್ಪೂರ್ತಿ ತುಂಬಬೇಕೆಂದರು.

ಕನ್ನಡ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾಧ್ಯಕ್ಷ ಕೇಶವ ಕಾಮತ್ ಮಾತನಾಡಿ ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಚೆನ್ನಯ್ಯನಕೋಟೆ ಗ್ರಾಮದಲ್ಲಿ ಕಳೆದ 11 ವರ್ಷಗಳಿಂದ ಕಾರ್ಗಿಲ್ ವಿಜಯೋತ್ಸವ, ಡಾ ಎಪಿಜೆ ಅಬ್ದುಲ್ ಕಲಾಂ ಅವರ ಪುಣ್ಯಸ್ಮರಣೆ ಸೇರಿದಂತೆ ಯುದ್ಧದಲ್ಲಿ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಯೋಧರನ ಸ್ಮರಿಸುವ ಹಾಗೂ ಕುಟುಂಬವನ್ನ ಗೌರವಿಸುವ ದೇಶಾಭಿಮಾನದ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡು ಮುನ್ನಡೆಯುತ್ತಿರುವ ಸರ್ವ ಸಹಾಯ ಮಿತ್ರ ಮಂಡಳಿಯ ಪದಾಧಿಕಾರಿಗಳ ಸೇವಾ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭ ಸರ್ವಸಹಾಯಿ ಮಿತ್ರ ಮಂಡಳಿ ಅಧ್ಯಕ್ಷ ವಿಜು, ಉಪಾಧ್ಯಕ್ಷೆ ದೊಡ್ಡಮ್ಮ, ಪ್ರಧಾನ ಕಾರ್ಯದರ್ಶಿ ಇಂದಿರಾ ಮುರ್ಗೇಶ್, ಗೌರವಾಧ್ಯಕ್ಷ ಸಲೀಂ, ಗೌರವ ಸಲಹೆಗಾರ ಅಬ್ದುಲ್ ರಹಿಮಾನ್, ಖಜಾಂಚಿ ಶಶಿ ಅಚ್ಚುದನ್, ಸಂಘನಾ ಕಾರ್ಯದರ್ಶಿ ಮಾದೇವ, ಸ್ವಾಗತ ಸಮಿತಿ ಅಧ್ಯಕ್ಷರು ಬನೊಜ್, ಪ್ರಮುಖರಾದ ಸನಲ್, ಸುಶೀಲಾ, ಮಹೇಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Share this article

ಟಾಪ್ ನ್ಯೂಸ್

More News