ಜಿಲ್ಲೆಯ ಅಭಿವೃದ್ಧಿ ಸಂಬಂಧ ಸಚಿವರು, ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಸಮಾಲೋಚನೆ
ಮಡಿಕೇರಿ : ಕೊಡಗು ಜಿಲ್ಲೆಯ ಅಭಿವೃದ್ಧಿ ಸಂಬಂಧ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ ಅವರೊಂದಿಗೆ ಸಮಾಲೋಚನಾ ಸಭೆ ನಡೆಸಿದರು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರುಗಳ ಜೊತೆ ಸಭೆ ನಡೆಸಿ, ಜಿಲ್ಲಾ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳು ಉಂಟುಮಾಡಿರುವ ಧನಾತ್ಮಕ ಬದಲಾವಣೆಯ ಮಾಹಿತಿ ಪಡೆದು, ವಿವಿಧ ಇಲಾಖೆಗಳ ಅಡಿ ನೀಡಲಾದ ಅನುದಾನ ಹಾಗೂ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ, ಸರ್ಕಾರದ ಎಲ್ಲಾ ಕಾರ್ಯಕ್ರಮಗಳು ಪ್ರತಿ ಅರ್ಹರನ್ನೂ ತಲುಪಿಸುವ ನಿಟ್ಟಿನಲ್ಲಿ ಕೆಲವು ಮಹತ್ವದ ಸಲಹೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದರು.








