ಬೇತ್ರಿ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ವಿರಾಜಪೇಟೆ : ವಿರಾಜಪೇಟೆ ವ್ಯಾಪ್ತಿಯ ಬೇತ್ರಿ ಹೊಳೆಯಲ್ಲಿ ಅಪರಿಚಿತ ಪುರುಷನ ಮೃತದೇಹವೊಂದು ಪತ್ತೆಯಾಗಿದೆ. ನದಿ ದಡದ ಬಿದಿರು ಮರಗಳ ನಡುವೆ ಸಿಕ್ಕಿಕೊಂಡಿದ್ದು, ನದಿ ನೀರಿನಲ್ಲಿ ಕೊಚ್ಚಿಕೊಂಡು ಬಂದಿರ ಬಹುದೆಂಬ ಶಂಕೆ ವ್ಯಕ್ತವಾಗಿದೆ. ಕೂಡಲೇ ಸ್ಥಳೀಯ ನಿವಾಸಿಗಳು ವಿರಾಜಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದ್ದು, ಇತ್ತೀಚೆಗೆ ನಾಪತ್ತೆಯಾಗಿರುವ,ಅಥವಾ ಮನೆಯಿಂದ ಕಾಣೆಯಾಗಿದವರ ಮಾಹಿತಿ ಇದ್ದರೆ ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಕೋರಿದ್ದಾರೆ.








