Breaking News :

ನಾಳೆ ರಾಜ್ಯಾದ್ಯಂತ ಬಸ್ ಮುಷ್ಕರ ಫಿಕ್ಸ್ : ಹೈಕೋರ್ಟ್ ಆದೇಶದ ನಡುವೆಯೂ ಬಂದ್ ನಡೆಸಲು ಸಾರಿಗೆ ನೌಕರರ ತೀರ್ಮಾನ 


ನಾಳೆ ರಾಜ್ಯಾದ್ಯಂತ ಬಸ್ ಮುಷ್ಕರ ಫಿಕ್ಸ್ : ಹೈಕೋರ್ಟ್ ಆದೇಶದ ನಡುವೆಯೂ ಬಂದ್ ನಡೆಸಲು ಸಾರಿಗೆ ನೌಕರರ ತೀರ್ಮಾನ


ಬೆಂಗಳೂರು : ನಾಳೆ (ಮಂಗಳವಾರ ಆ.5) ರಾಜ್ಯಾದ್ಯಂತ ಸರಕಾರಿ ಬಸ್‌ಗಳೂ ಸ್ನಾಚರಿಸುವುದಿಲ್ಲ ಎಂದು ಸಾರಿಗೆ ನೌಕರರ ಮುಖಂಡರು ಹೇಳಿದ್ದಾರೆ .

ನಾಳೆ ಒಂದು ದಿನದ ಮಟ್ಟಿಗೆ ಮುಷ್ಕರ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದ್ದರೂ, ಹೈಕೋರ್ಟ್ ಆದೇಶ ಪ್ರತಿ ಕೈಸೇರದ ಹಿನ್ನೆಲೆಯಲ್ಲಿ ನಾಳೆ(ಆ.5)‌ಮುಷ್ಕರ ನಡೆಯಲಿದೆ. ಬೆಳಗ್ಗೆ ಆರು ಗಂಟೆಯಿಂದಲೇ ಬಸ್‌ಗಳು ಸಂಚಾರ ನಿಲ್ಲಿಸಲಿವೆ ಎಂದು ತಿಳಿಸಿದ್ದಾರೆ.

ಅರಿಯರ್ಸ್ ಸೇರಿದಂತೆ 12 ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರಕ್ಕೆ ಕರೆನೀಡಿದ್ದು, ನಾಳೆ ಕೆಎಸ್ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಎಲ್ಲ ಬಸ್‌ಗಳು ಸಂಚಾರ ಸ್ಥಗಿತಗೊಳಿಸಲಿವೆ ಎಂದು ಸ್ಪಷ್ಟಪಡಿಸಿದ್ದಾರೆ‌.

ಹೈಕೋರ್ಟ್ ಸ್ಟೇ ಕುರಿತು ಸಾರಿಗೆ ನೌಕರರ ಮುಖಂಡ ಸ್ಪಷ್ಟನೆ

ಸಾರಿಗೆ ನೌಕರರ ಮುಖಂಡ ಮಂಜುನಾಥ್ ಹೈಕೋರ್ಟ್ ನೀಡಿದ ತಡೆಯಾಜ್ಞೆ ಕುರಿತು ಪ್ರತಿಕ್ರಿಯಿಸಿದ್ದಾರೆ. ಸಾರಿಗೆ ನೌಕರರು ಹಲವು ದಿನಗಳ ಗಡುವು ನೀಡಿ ಇದೀಗ ಕೊನೆಯ ಅಸ್ತ್ರವಾಗಿ ಮುಷ್ಕರ ಘೋಷಿಸಲಾಗಿದೆ. ಇದೀಗ ವಾಪಸ್ ಪಡೆಯಲು ಸಾಧ್ಯವಿಲ್ಲ. ಜಂಟಿ ಕ್ರಿಯಾ ಸಮಿತಿಗೆ ಮುಂಚಿತವಾಗಿ ಕೋರ್ಟ್ ನೋಟೀಸ್ ಕೊಡಬೇಕಿತ್ತು. ನಮ್ಮ ಅಭಿಪ್ರಾಯವನ್ನು ಕೋರ್ಟ್ ಆಲಿಸಬೇಕಿತ್ತು. ಆದರೆ ಇಲ್ಲಿ ಕೋರ್ಟ್ ನಮ್ಮ ಅಭಿಪ್ರಾಯವೇ ಕೇಳಿಲ್ಲ. ದಿಢೀರ್ ತಡೆಯಾಜ್ಞೆ ನೀಡಿದರೆ ಮುಷ್ಕರ ವಾಪಸ್ ಪಡೆಯುಲ ಸಾಧ್ಯವಿಲ್ಲ ಎಂದು ಮಂಜನಾಥ್ ಹೇಳಿದ್ದಾರೆ. ನಾಳೆ ಬೆಳಿಗ್ಗೆ 6 ಗಂಟೆಯಿಂದ ಮುಷ್ಕರ ಆರಂಭಗೊಳ್ಳಲಿದೆ. ನೌಕರರು ಭಯ ಬೀಳುವ ಅಗತ್ಯ ಇಲ್ಲ. ಕೋರ್ಟ್ ಗೆ ನಾವು ಮನವಿ ಮಾಡಿಕೊಳ್ಳುತ್ತೇವೆ ಎಂದು ಮಂಜುನಾಥ್ ಹೇಳಿದ್ದಾರೆ.

Share this article

ಟಾಪ್ ನ್ಯೂಸ್

More News