Breaking News :

ತಿತಿಮತಿಯಲ್ಲಿ ರೈತ ಸಂಘದ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ – ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟದಿದ್ದಲ್ಲಿ ಕೊಡಗು ಬಂದ್ ಎಚ್ಚರಿಕೆ


ತಿತಿಮತಿಯಲ್ಲಿ ರೈತ ಸಂಘದ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ – ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟದಿದ್ದಲ್ಲಿ ಕೊಡಗು ಬಂದ್ ಎಚ್ಚರಿಕೆ


ಮಡಿಕೇರಿ : ಜಿಲ್ಲೆಯಲ್ಲಿ ಮುಂದುವರೆದಿರುವ ಕಾಡು ಪ್ರಾಣಿಗಳ ಹಾವಳಿಯಿಂದ ರೈತರು, ಕಾರ್ಮಿಕರು, ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗದಂತಹ ಸ್ಥಿತಿ ಎದುರಾಗಿದೆ. ಕೂಡಲೇ ಕಾಡು ಪ್ರಾಣಿಗಳ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟದಿದ್ದಲ್ಲಿ ಕೊಡಗು ಬಂದ್ ಗೆ ಕರೆ ನೀಡುವ ಮೂಲಕ ತೀವ್ರ ಸ್ವರೂಪದ ಹೋರಾಟವನ್ನು ರೂಪಿಸಲಾಗುತ್ತದೆ ಎಂದು ಕೊಡಗು ರೈತ ಸಂಘದ ಎಚ್ಚರಿಸಿದೆ.

ಮಾನವ ಹಾಗೂ ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ತಿತಿಮತಿಯಲ್ಲಿ ರೈತ ಸಂಘದ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಮಾನವ ಸರಪಳಿ ಹಾಗೂ ಪ್ರತಿಭಟನಾ ಮೆರವಣಿಗೆಯಲ್ಲಿ ಜಿಲ್ಲೆಯ ನಾನಾ ಕಡೆಗಳಿಂದ ಹೆಚ್ಚಿನ ಸಂಖ್ಯೆಯ ಆಗಮಿಸಿದ್ದ ರೈತರು ಕಾರ್ಮಿಕರು ಪಾಲ್ಗೊಂಡಿದ್ದರು.

ಬಳಿಕ ಅರಣ್ಯ ಭವನದ ಆವರಣದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಇಲಾಖೆ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು ಕಾಡು ಪ್ರಾಣಿಗಳ ಹಾವಳಿಯನ್ನ ಶಾಶ್ವತವಾಗಿ ತಡೆಗಟ್ಟಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕಾಡ್ಯಮಾಡ ಮನುಸೋಮಯ್ಯ, ಅಧಿಕಾರಿಗಳ ಬೇಜವಾಬ್ದಾರಿತನದಿಂದ ಕಾಡು ಪ್ರಾಣಿಗಳ ಹಾವಳಿ ಮಿತಿಮೀರಿದ್ದು, ನಿರಂತರ ಕೃಷಿ ಫಸಲುಗಳನ್ನು ನಾಶ ಮಾಡುವುದರ ಜತೆಗೆ ಕಾರ್ಮಿಕರು, ಬೆಳೆಗಾರರು, ಶಾಲಾ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿ ಮಾಡುತ್ತಿದ್ದು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗಿದೆ.
ಅರಣ್ಯ ಇಲಾಖೆ ಯಾವುದೇ ಶಾಶ್ವತ ಯೋಜನೆಗಳನ್ನು ರೂಪಿಸದೆ ಕಾಟಾಚಾರಕ್ಕೆ ಅವಯಜ್ಞಾನಿಕ ಕಾಮಗಾರಿಗಳನ್ನು ಮಾಡುವುದರ ಮೂಲಕ ತೆರಿಗೆ ಹಣವನ್ನು ಪೋಲು ಮಾಡುತ್ತಿದ್ದು ಯೋಜನೆಯ ಹಣವನ್ನು ಅಧಿಕಾರಿಗಳು ಭ್ರಷ್ಟಾಚಾರದ ಮೂಲಕ ಕಬಳಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು
ಜಿಲ್ಲೆಯ ಜನರ ತಾಳ್ಮೆಯನ್ನು ಪರೀಕ್ಷೆ ಮಾಡದೆ ಕಾಡುಪ್ರಾಣಿಗಳ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟದಿದ್ದಲ್ಲಿ ಬೃಹತ್ ಹೋರಾಟದೊಂದಿಗೆ ಕೊಡಗು ಬಂದ್ ಗೆ ಕರೆ ನೀಡಿವು ಮೂಲಕ ಜಿಲ್ಲೆಯ ಜನರನ್ನ ಒಗ್ಗೂಡಿಸಿ ಬೃಹತ್ ಪ್ರತಿಭಟನ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದರು.

ಜಿಲ್ಲೆಯ ನಾನಾ ಭಾಗಗಳಿಂದ ಆಗಮಿಸಿದ ರೈತರು ಕಾಡುಪ್ರಾಣಿಗಳ ಹಾವಳಿಯಿಂದ ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳ ಗಮನ ಸೆಳೆದರು. ಮಳೆಯ ನಡುವೆಯೇ ನಡೆದ ಸಭೆಯಲ್ಲಿ ಕಾಡು ಪ್ರಾಣಿಗಳ ಹಾವಳಿಯ ಬಗ್ಗೆ ಸುದೀರ್ಘ ಚರ್ಚಿಸಲಾಯಿತು.
ಇದೇ ಸಂದರ್ಭ ಹಲವು ಬೇಡಿಕೆಗಳನ್ನು ಮುಂದಿಟ್ಟು
ಅರಣ್ಯ ಇಲಾಖೆ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಅಧಿಕಾರಿ ಸೀಮಾ, ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ವಿರಾಜಪೇಟೆ ಉಪವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್, ಉಪ ಅರಣ್ಯ ಸಂರಕ್ಷಣಾಧಿಕಾರಿ ನೆಹರು, ಕೊಡಗು ರೈತ ಸಂಘ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಟ್ರುಮಾಡ ಸುಜಯ್ ಬೋಪಯ್ಯ, ಜಿಲ್ಲಾ ಪ್ರಧಾನ ಸಂಚಾಲಕ ಪುಚ್ಚಿಮಾಡ ಸುಭಾಸ್ ಸುಬ್ಬಯ್ಯ, ಸಹ ಕಾರ್ಯದರ್ಶಿ ಅಜ್ಜಮಾಡ ಚಂಗಪ್ಪ, ಜಿಲ್ಲಾ ಖಜಾಂಚಿ ಇಟ್ಟೀರ ಸಭಿತ ಭೀಮಯ್ಯ, ವಿರಾಜಪೇಟೆ ತಾಲೂಕು ಅಧ್ಯಕ್ಷ ಬಾಚಮಾಡ ಭವಿ ಕುಮಾರ್, ಸೋಮವಾರಪೇಟೆ ಹೂವಯ್ಯ, ಪೊನ್ನಂಪೇಟೆ ತಾಲೂಕು ಅಧ್ಯಕ್ಷ ಅಲೆಮಾಡ ಮಂಜು ಸಂಪತ್ ಸೇರಿದಂತೆ ಕಾರ್ಮಿಕ ಸಂಘಟನೆ ಪ್ರಮುಖರು ಬೆಳೆಗಾರರು,ವಿದ್ಯಾರ್ಥಿಗಳು ಈ ಸಂದರ್ಭ ಉಪಸ್ಥಿತರಿದ್ದರು.

Share this article

ಟಾಪ್ ನ್ಯೂಸ್

More News