Breaking News :

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಖಂಡಿಸಿ ಮಡಿಕೇರಿಯಲ್ಲಿ ನಾಳೆ ಭಕ್ತರಿಂದ ಬೃಹತ್ ಜಾಥಾ


ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಖಂಡಿಸಿ ಮಡಿಕೇರಿಯಲ್ಲಿ ನಾಳೆ ಭಕ್ತರಿಂದ ಬೃಹತ್ ಜಾಥಾ


ಮಡಿಕೇರಿ : ಧರ್ಮಸ್ಥಳ ಕ್ಷೇತ್ರಕ್ಕೆ ಹಾಗೂ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ನಿರಂತರವಾಗಿ ಕಳಂಕ ತರುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿರುವ ಬೆಳವಣಿಗೆಯಿಂದಾಗಿ ಕ್ಷೇತ್ರದ ಭಕ್ತರಿಗೆ ನೋವುಂಟಾಗಿದೆ.

ಭಕ್ತರ ಮನಸಿನಲ್ಲಿ ಆಕ್ರೋಶ , ಯುವ ಜನಾಂಗದಲ್ಲಿ ಕೋಮು ಭಾವನೆ ವ್ಯಕ್ತವಾಗುತ್ತಿದ್ದು ಸಮಾಜದಲ್ಲಿ ಅಶಾಂತಿಯ ವಾತವರಣ ನಿರ್ಮಾಣವಾಗುತ್ತಿದೆ. ಈ ರೀತಿಯ ಅಪಪ್ರಚಾರ ಮಾಡುತ್ತಿರುವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲು ಸರಕಾರಕ್ಕೆ ಮನವಿ ಸಲ್ಲಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದ ಕೊಡಗು ಜಿಲ್ಲೆಯ ಭಕ್ತಭಿಮಾನಿಗಳು ಆಗಸ್ಟ್ 8 ರಂದು ಶುಕ್ರವಾರ ಬೆಳಗ್ಗೆ 10.30 ರಿಂದ 12 ಗಂಟೆಯವರೆಗೆ ಮಡಿಕೇರಿಯ ಗಾಂಧಿ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಜಾಥಾ ನಡೆಯಲಿದೆ.

ಅಪಪ್ರಚಾರ ಮಾಡುತ್ತಿರುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಶ್ರೀ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆಯ ಪರವಾಗಿ ಕೊಡಗು ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಗುತ್ತದೆ ಎಂದು ಶ್ರೀ ಧರ್ಮಸ್ಥಳ ಭಕ್ತಾಭಿಮಾನಿ ಬಳಗದ ಮಡಿಕೇರಿ ಸಂಚಾಲಕರಾದ ಧನಂಜಯ ಮಾಹಿತಿ ನೀಡಿದ್ದಾರೆ.

Share this article

ಟಾಪ್ ನ್ಯೂಸ್

More News