Breaking News :

ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ

ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ

ಮಡಿಕೇರಿ : ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ, ಪ್ರಧಾನಮಂತ್ರಿಯವರ ವಿಶ್ವಕರ್ಮ ಯೋಜನೆ ಜಿಲ್ಲಾ ಮಟ್ಟದ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ವಿಶ್ವಕರ್ಮ ಯೋಜನೆಯ ನಾಮ ನಿರ್ದೇಶಿತ ಸದಸ್ಯರಾದ ನಾಗೇಶ್ ಕುಂದಲ್ವಾಡಿ ಹಾಗೂ ರಾಬಿನ್ ದೇವಯ್ಯ ಅವರು ಸಭೆಯಲ್ಲಿ ಮಾತನಾಡಿ ವಿಶ್ವಕರ್ಮ ಯೋಜನೆಯಡಿಯಲ್ಲಿ ಫಲಾನುಭವಿಗಳ ಯಶೋಗಾಥೆ ಒದಗಿಸುವಂತೆ ತಿಳಿಸಿದರು.
ಸಭೆಯಲ್ಲಿ ಪ್ರಧಾನಮಂತ್ರಿಯವರ ಉದ್ಯೋಗ ಸೃಜನೆ ಯೋಜನೆಯಡಿಯಲ್ಲಿ ನಿಗಧಿತ ಗುರಿ ನೀಡಿ ಪ್ರಗತಿ ಸಾಧಿಸಿರುವ ಬಗ್ಗೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮತ್ತಷ್ಟು ಪ್ರಗತಿ ಸಾಧಿಸುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಇರುವ ಕುಂದು ಕೊರತೆ, ಚಟುವಟಿಕೆ ಹಾಗೂ ಬದಲಾವಣೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಕೈಗಾರಿಕಾ ಇಲಾಖೆ ಕಾರ್ಯಕ್ರಮ ಬಗ್ಗೆ ಮಾಹಿತಿ ಪಡೆದು ಉದ್ದಿಮೆದಾರರನ್ನು ಪ್ರೋತ್ಸಾಹಿಸುವುದರ ಜತೆಗೆ ಉದ್ದಿಮೆ ಪ್ರಾರಂಭಿಸಲು ಹೆಚ್ಚಿನ ಅನುಕೂಲ ಮಾಡಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ಶಿವಲಿಂಗಯ್ಯ ಹಾಗೂ ಉಪ ನಿರ್ದೇಶಕರಾದ ಉಮೇಶ್ವಿ ಹಾಜರಿದ್ದು ಇಲಾಖೆಯ ಕಾರ್ಯಕ್ರಮದಲ್ಲಿ ಆಗಿರುವ ಪ್ರಗತಿಯನ್ನು ಸಭೆಗೆ ವಿವರಿಸಿದರು.
ಕೈಗಾರಿಕೆಗಳ ಬೆಳವಣಿಗೆ ಪೂರಕವಾದ ಸಂಸ್ಥೆ, ಇಲಾಖೆಗಳಾದ ಕಾಸಿಯಾ, ಕೆಐಎಡಿಬಿ, ಕೆಎಸ್‍ಎಸ್‍ಐಡಿಸಿ ಅಧಿಕಾರಿಗಳು, ಪ್ರತಿನಿಧಿಗಳು ಭಾಗವಹಿಸಿದರು.

Share this article

ಟಾಪ್ ನ್ಯೂಸ್

More News