ಬೇಡಿಕೆ ಈಡೇರಿಕೆಗಾಗಿ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದ ಆಶ್ರಮ ಶಾಲೆ ಶಿಕ್ಷಕರುಗಳ ನಿಯೋಗ
ಬೆಂಗಳೂರು : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಶ್ರಮ ಶಾಲೆಯ ಶಿಕ್ಷಕರುಗಳ ನಿಯೋಗವು ಮಾನ್ಯ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಅವರ ನಿವಾಸ ಕೃಷ್ಣ ದಲ್ಲಿ ಭೇಟಿಯಾದರು.
ಮಾನ್ಯ ಮುಖ್ಯಮಂತ್ರಿಗಳಲ್ಲಿ ಅವರುಗಳ ಸಮಸ್ಯೆಗಳನ್ನು ಹಾಗೂ ಬೇಡಿಕೆಗಳನ್ನು ಹೇಳಿಕೊಂಡ ನಿಯೋಗದವರು, ಅವರ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಮಾಡಿದರು. ಅವರ ಸಮಸ್ಯೆಗಳನ್ನು ಅತ್ಯಂತ ಗಂಭೀರವಾಗಿ ಆಲಿಸಿದ ಮಾನ್ಯ ಮುಖ್ಯಮಂತ್ರಿಗಳು, ಎಲ್ಲವನ್ನೂ ಕೂಲಂಕುಶವಾಗಿ ಪರಿಶೀಲಿಸಿ ಸ್ಪಂದಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಉಪಸ್ಥಿತರಿದ್ದರು.








