Breaking News :

ಕರಿಕೆ ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭ


ಕರಿಕೆ ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭ


 ಮಡಿಕೇರಿ : ಕರಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಆಂಗ್ಲ ಮಾಧ್ಯಮ ಒಂದನೇ ತರಗತಿ ಆರಂಭಕ್ಕೆ ಚಾಲನೆ ನೀಡಲಾಯಿತು.

ಇತ್ತೀಚೆಗೆ ನಡೆದ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಕರಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಲಚಂದ್ರ ನಾಯರ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಮತ್ತು ಗ್ರಾಮಾಂತರ ಪ್ರದೇಶದ ಮಕ್ಕಳಲ್ಲಿ ಆಂಗ್ಲಭಾಷಾ ಜ್ಞಾನ ಬೆಳೆಸುವ ದಿಸೆಯಲ್ಲಿ ಇಂಗ್ಲೀಷ್ ಮಾಧ್ಯಮ ಆರಂಭಿಸಲಾಗುತ್ತಿರುವುದು ಒಳ್ಳೆಯ ಬೆಳವಣಿಗೆ, ಸರಕಾರಿ ಶಾಲೆಯ ಶೈಕ್ಷಣಿಕ ಪ್ರಗತಿ ಹಾಗೂ ಅಭಿವೃದ್ಧಿಗೆ ಪೋಷಕರು ಕೂಡ ಸಹಕರಿಸಬೇಕೆಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಪ್ರಸನ್ನ ಕುಮಾರಿ, ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಆರಂಭಿಸಲಾಗುತ್ತಿದ್ದು, ಇದರಿಂದ ಮಕ್ಕಳು ಮಾತೃಭಾಷೆಯೊಂದಿಗೆ ಆಂಗ್ಲ ಭಾಷೆ ಕಲಿಯಲು ಸುಲಭವಾಗುತ್ತದೆ. ಪೋಷಕರು ತಮ್ಮ ಮಕ್ಕಳ ಕಲಿಕಾ ಪ್ರಗತಿ ಬಗ್ಗೆ ತಿಳಿಯಲು ಆಗಿಂದಾಗ್ಗೆ ಶಾಲೆಗೆ ಭೇಟಿ ನೀಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಎಸ್ ಡಿ ಎಂ ಸಿ ಅಧ್ಯಕ್ಷ ಪ್ರದೀಪ್ ಕುಮಾರ್ ಮಾತನಾಡಿ, ನಮ್ಮ ಶಾಲೆಯಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭವಾಗುತ್ತಿರುವುದು ತುಂಬಾ ಸಂತಸ ವಿಚಾರ ಎಂದರು.

ಈ ಸಂದರ್ಭದಲ್ಲಿ ಶಿಕ್ಷಕಿಯರಾದ ಮಹಾಲಕ್ಷ್ಮಿ, ಅಹಲ್ಯ, ಲತಾ, ಯಮುನಾ ಮತ್ತು ಎಸ್ ಡಿ ಎಂ ಸದಸ್ಯರು ಪೋಷಕರು ಹಾಗೂ ಪಂಚಾಯತಿ ಸದಸ್ಯರಾದ ಜಯಶ್ರೀ ಕೆ.ಸಿ.ಕೃಷ್ಣ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Share this article

ಟಾಪ್ ನ್ಯೂಸ್

More News