ಉಪವಾಸ ಮಾಡುವುದು ಕಷ್ಟವಾದರೂ, ಉಪವಾಸದಿಂದ ಹಲವಾರು ಆರೋಗ್ಯಕರ ಪ್ರಯೋಜನಗಳಿವೆ. ಅಧಿಕ ರಕ್ತದೊತ್ತಡ, ಚಯಾಪಚಯ ಸಮಸ್ಯೆಗಳು, ಉರಿಯೂತದ ಕಾಯಿಲೆಗಳು, ಮಾನಸಿಕ ಅಸ್ವಸ್ಥತೆಗಳು ಮತ್ತು ಅಟೊಪಿಕ್ ಸಮಸ್ಯೆಗಳಿಗೆ ಉಪವಾಸ ಉತ್ತಮ ಎನ್ನುವುದು ತಿಳಿದು ಬಂದಿದೆ.
ಭಾರತದಲ್ಲಿ ಶೇ.61 ರಷ್ಟು ಸಾವುಗಳು ಸಾಂಕ್ರಾಮಿಕವಲ್ಲದ ಆರೋಗ್ಯ ಸಮಸ್ಯೆಗಳಿಂದ ಸಂಭವಿಸುತ್ತಿದ್ದು, ಈ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಉಪವಾಸವೇ ದಿವ್ಯೌಷಧ.
ನಿರ್ದಿಷ್ಟ ಅವಧಿಯವರೆಗೆ ಆಹಾರ, ನಿಕೋಟಿನ್ ಮತ್ತು ಕೆಫೀನ್ ನಂತಹ ಅಂಶಗಳನ್ನು ಸೇವಿಸದೆ ಇರುವುದರಿಂದ ದೇಹ ರಿಫ್ರೆಶ್ ಆಗುತ್ತದೆ.
ಉಪವಾಸದ ಅವಧಿಯಲ್ಲಿ ತಾಜಾ ಹಣ್ಣಿನ ಜ್ಯೂಸ್, ನಿಂಬೆ ಹಣ್ಣಿನ ರಸ, ಜೇನುತುಪ್ಪ, ವೆಜಿಟೆಬಲ್ ಸೂಪ್ ಗಳನ್ನು ಸೇವಿಸುವುದು ಉತ್ತಮ.
ಇದರಿಂದ ಪಿತ್ತಜನಕಾಂಗ, ಮೂತ್ರಪಿಂಡಗಳು, ಕರುಳು, ಚರ್ಮ ಮತ್ತು ಶ್ವಾಸಕೋಶಗಳು ಸ್ವಾಸ್ಥ್ಯವಾಗಿರುತ್ತವೆ. ಉಪವಾಸದ ಅವಧಿಯಲ್ಲಿ ಸರಿಯಾಗಿ ವಿಶ್ರಾಂತಿ ತೆಗೆದುಕೊಳ್ಳುವುದು ಬಹಳ ಮುಖ್ಯವಾಗಿದೆ.







