ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆ ಕಟ್ಟಡದ ಉಳಿಕೆ ಮತ್ತು ಹೆಚ್ಚುವರಿ ಕಾಮಗಾರಿಗೆ ನಾಳೆ ಶಿಲಾನ್ಯಾಸ
ಅನುದಾನ ಒದಗಿಸಿದ ಸರಕಾರಕ್ಕೆ ಧನ್ಯವಾದ ಸಲ್ಲಿಸಿದ ಮಂತರ್ ಗೌಡ
ಮಡಿಕೇರಿ : ವೈದ್ಯಕೀಯ ಶಿಕ್ಷಣ ಇಲಾಖೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರ ಸಹಯೋಗದೊಂದಿಗೆ 450 ಹಾಸಿಗೆ ಸಾಮಥ್ರ್ಯದ ಬೋಧಕ ಆಸ್ಪತ್ರೆ ಕಟ್ಟಡದ ಉಳಿಕೆ ಮತ್ತು ಹೆಚ್ಚುವರಿ (ಎರಡನೇ ಹಂತ) ಕಾಮಗಾರಿಯ ಶಿಲಾನ್ಯಾಸ ಸಮಾರಂಭವು ಆಗಸ್ಟ್, 15 ರಂದು ಮಧ್ಯಾಹ್ನ 1 ಗಂಟೆಗೆ ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆ(ಜಿಲ್ಲಾ ಆಸ್ಪತ್ರೆ) ಆವರಣದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾದ ಶರಣ ಪ್ರಕಾಶ್ ಆರ್.ಪಾಟೀಲ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ. ಮಂತರ್ ಗೌಡ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಮಾಜಿ ಸಚಿವರು ಹಾಗೂ ಆಡಳಿತ ಮಂಡಳಿ ಸದಸ್ಯರಾದ ಎಂ.ಸಿ. ನಾಣಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ವೈದ್ಯಕೀಯ ಶಿಕ್ಷಣ ಇಲಾಖೆ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್, ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ, ನಿರ್ದೇಶಕರಾದ ಎಂ.ಎಸ್.ಸುಜಾತ ರಾಥೋಡ್, ಆಕುಕ ಎಂಜಿನಿಯರಿಂಗ್ ಘಟಕ, ಮುಖ್ಯ ಅಭಿಯಂತರರು ಜೆ.ಆರ್.ಮುಕ್ಕಣ್ಣ ನಾಯ್ಕ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಕೊಡಗು ಜಿ.ಪಂ.ಸಿಇಒ ಆನಂದ ಪ್ರಕಾಶ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ನಿರ್ದೇಶಕರು ಹಾಗೂ ಡೀನ್ ಎ.ಜೆ.ಲೋಕೇಶ್, ಇತರರು ಪಾಲ್ಗೊಳ್ಳಲಿದ್ದಾರೆ.








