Breaking News :

ಶಾಸಕ ಪೊನ್ನಣ್ಣನವರಿಂದ KSRTC 8 ಹೊಸ ಬಸ್ ಮಾರ್ಗ ಹಾಗೂ ಬಸ್ ಗಳ ಉದ್ಘಾಟನೆ

 

 

ಜನವಾಹಿನಿ NEWS ವಿರಾಜಪೇಟೆ :

ನಗರ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ನೂತನವಾಗಿ ಆರಂಭಿಸಲಾದ, 8 ಹೊಸ ಮಾರ್ಗಗಳನ್ನು ಹಾಗೂ 8 ಹೊಸ ಬಸ್ ಗಳ ಉದ್ಘಾಟನೆ ಕಾರ್ಯಕ್ರಮವನ್ನು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಇಂದು ನೆರವೇರಿಸಿದರು.

ವೇಗವಾಗಿ ಬೆಳೆಯುತ್ತಿರುವ ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರಯಾಣಿಸುವ ಪ್ರಯಾಣಿಕರ ದಟ್ಟಣೆಯನ್ನು ತಗ್ಗಿಸಲು ಹಾಗೂ ಏರಿಕೆಯಾಗಿರುವ ಪ್ರಯಾಣಿಕರ ಸಂಖ್ಯೆಗನುಗುಣವಾಗಿ ನೂತನ ಬಸ್ ಮಾರ್ಗಗಳನ್ನು ಹಾಗೂ ಈ ಮಾರ್ಗಕ್ಕೆ ಹೆಚ್ಚುವರಿಯಾಗಿ ಎಂಟು ಹೊಸ ಬಸ್ಗಳನ್ನು ಮಾನ್ಯ ಶಾಸಕರ ಪ್ರಯತ್ನದಿಂದಾಗಿ ಒದಗಿ ಬಂದಿದೆ. ಬಸ್ ಹಾಗೂ ಬಸ್ ಮಾರ್ಗಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಮಾನ್ಯ ಶಾಸಕರು, ಆಧುನಿಕತೆ ಹಾಗೂ ನಗರೀಕರಣ ವೃದ್ಧಿಯಾದಂತೆಲ್ಲ ಜನಸಂದಣಿ ಜಾಸ್ತಿಯಾಗುವುದನ್ನು ಮನಗಂಡು ಪ್ರಯಾಣಿಕರ ಅನುಕೂಲಕ್ಕಾಗಿ ಈ ಹೊಸ ಮಾರ್ಗಗಳನ್ನು ಹಾಗೂ ಸುಸೂತ್ರವಾಗಿ ಪ್ರಯಾಣಿಸಲು ಹೊಸ ಬಸ್ ಗಳನ್ನು ಈ ಭಾಗಕ್ಕೆ ಕಲ್ಪಿಸಲಾಗಿದೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

Share this article

ಟಾಪ್ ನ್ಯೂಸ್

More News