ಆ.೨೩ ರಂದು ಭಾಗಮಂಡಲದಲ್ಲಿ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ
ಮಡಿಕೇರಿ : ಕೊಡಗು ಜಿಲ್ಲಾ ಯುವ ಒಕ್ಕೂಟ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆ.೨೩ ರಂದು ಭಾಗಮಂಡಲದಲ್ಲಿ ೩೩ನೇ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ.
ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್, ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಮತ್ತು ಅಯ್ಯಂಗೇರಿ ಶ್ರೀ ಕೃಷ್ಣ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ಭಾಗಮಂಡಲ ಗ್ರಾಮದ ಬಳ್ಳಡ್ಕ ಅಪ್ಪಾಜಿ ಹಾಗೂ ಅನು ಅವರ ಗದ್ದೆಯಲ್ಲಿ ನಡೆಯಲಿದೆ ಎಂದರು.
ಬೆಳಿಗ್ಗೆ ೯ ಗಂಟೆಗೆ ಪತ್ರಕರ್ತರು ಮತ್ತು ಆಯೋಜಕರ ನಡುವೆ ವಾಲಿಬಾಲ್ ಪ್ರದರ್ಶನ ಪಂದ್ಯ ನಡೆಯುವ ಮೂಲಕ ಕ್ರೀಡಾಕೂಟಗಳು ಆರಂಭಗೊಳ್ಳಲಿವೆ ಎಂದರು.
ಸಾರ್ವಜನಿಕ ಪುರುಷರು ಹಾಗೂ ಮಹಿಳೆಯರ (೭ ಮಂದಿಯ ತಂಡ) ವಿಭಾಗಕ್ಕೆ ಹಗ್ಗಜಗ್ಗಾಟ, ಪುರುಷರಿಗೆ ವಾಲಿಬಾಲ್ (೪ ಮಂದಿಯ ತಂಡ) ಮತ್ತು ಮಹಿಳೆಯರಿಗೆ ಥ್ರೋಬಾಲ್ (೬ ಮಂದಿಯ ತಂಡ) ಪಂದ್ಯಾವಳಿ ನಡೆಯಲಿದೆ.
ಮಧ್ಯಾಹ್ನ ೧ ಗಂಟೆಯಿAದ ಕೆಸರು ಗದ್ದೆ ಓಟ ನಡೆಯಲಿದ್ದು, ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಶಾಲಾ ಬಾಲಕ ಹಾಗೂ ಬಾಲಕಿಯರಿಗೆ, ಪ್ರೌಢಶಾಲಾ, ಪದವಿಪೂರ್ವ ಮತ್ತು ಪದವಿ ಕಾಲೇಜು ಯುವಕ, ಯುವತಿಯರಿಗೆ ಹಾಗೂ ಆಯೋಜಕರಿಗೆ ಓಟದ ಸ್ಪರ್ಧೆ, ಸಾರ್ವಜನಿಕ ಪುರುಷ ಹಾಗೂ ಮಹಿಳೆಯರಿಗೆ ಮುಕ್ತ ಓಟದ ಸ್ಪರ್ಧೆ ನಡೆಯಲಿದೆ.
ಸಾರ್ವಜನಿಕ ಹಗ್ಗಜಗ್ಗಾಟಕ್ಕೆ ಸ್ಪರ್ಧಿಸುವ ಪುರುಷರಿಗೆ ರೂ.೧,೫೦೦, ಮಹಿಳೆಯರು ರೂ.೧,೦೦೦, ಸಾರ್ವಜನಿಕರ ವಾಲಿಬಾಲ್ ಹಾಗೂ ಥ್ರೋಬಾಲ್ಗೆ ತಲಾ ರೂ.೧,೦೦೦ ಪ್ರವೇಶ ಶುಲ್ಕ ಪಾವತಿಸಬೇಕು. ಆ.೨೨ ರ ಸಂಜೆ ೫ ಗಂಟೆಯ ಒಳಗೆ ತಂಡದ ಹೆಸರು ನೋಂದಾಯಿಸಿಕೊಳ್ಳುವAತೆ ತಿಳಿಸಿದರು.
ಕ್ರೀಡಾಕೂಟದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಆಕರ್ಷಕ ನಗದು, ಪಾರಿತೋಷಕ ಮತ್ತು ಪ್ರಶಂಸನಾ ಪತ್ರ ನೀಡಲಾಗುವುದು ಎಂದರು.
ವಾಲಿಬಾಲ್ ಮತ್ತು ಥ್ರೋಬಾಲ್ ನೋಂದಾವಣಿಗಾಗಿ ಕಾವೇರಿಮನೆ ಭರತ್ ೮೪೩೧೫೧೫೪೦೪, ಹಗ್ಗಜಗ್ಗಾಟ ಬಿದ್ದಿಯಂಡ ಸುಭಾಷ್ ೯೮೪೫೦೫೩೫೦೧ ನ್ನು ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಯುವ ಒಕ್ಕೂಟದ ಜಿಲ್ಲಾಧ್ಯಕ್ಷ ಪಿ.ಪಿ.ಸುಕುಮಾರ್ ೯೪೮೧೨೧೩೯೨೦, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಬಾಳಾಡಿ ದಿಲೀಪ್ ಕುಮಾರ್ ೮೬೧೮೫೬೮೧೭೩, ಶ್ರೀ ಕೃಷ್ಣ ಯುವಕ ಸಂಘದ ಅಧ್ಯಕ್ಷ ಲತೇಶ್ ೯೪೮೩೬೬೨೬೧೦, ಜೀವನ್ ಕುಮಾರ್ ೯೩೫೩೪೨೬೦೭೩, ಕಾರ್ಯದರ್ಶಿ ಅಭಿಷೇಕ್ ೬೩೬೧೬೨೧೬೪೩, ಸದಸ್ಯ ಪ್ರತೀಶ್ ೮೨೧೭೮೦೧೩೩೬ ನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ ಬಾಳಾಡಿ ದಿಲೀಪ್ ಕುಮಾರ್ ಮಾತನಾಡಿ, ಪಂದ್ಯಾವಳಿಯ ಸಭಾ ಕಾರ್ಯಕ್ರಮವನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ವಹಿಸಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ, ಭಾಗಮಂಡಲ ಗ್ರಾ.ಪಂ ಅಧ್ಯಕ್ಷ ಕಾಳನ ರವಿ, ಅಯ್ಯಂಗೇರಿ ಗ್ರಾ.ಪಂ ಅಧ್ಯಕ್ಷರಾದ ಹೆಚ್.ಜಿ.ಪುಷ್ಪಾ, ಮಡಿಕೇರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದರು.
ಸAಜೆ ೬.೩೦ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಅಧ್ಯಕ್ಷತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ, ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸಮ ಕೊಡಗು ಜಿ.ಪಂ ಆಡಳಿತಾಧಿಕಾರಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ಭಾಗಮಂಡಲ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೊಸೂರು ಸತೀಶ್ ಕುಮಾರ್, ನಾಪೋಕ್ಲು ಗ್ರಾ.ಪಂ ಸದಸ್ಯರಾದ ಇಸ್ಮಾಯಿಲ್, ಮಕ್ಕಳ ತಜ್ಞ ಮೇಜರ್ ಡಾ.ಕುಶ್ವಂತ್ ಕೋಳಿಬೈಲು, ಮೈ ಭಾರತ್ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಕೆ.ಟಿ.ಕೆ.ಉಲ್ಲಾಸ್, ಅಯ್ಯಂಗೇರಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಹರೀಶ್, ಭಾಗಮಂಡಲ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪಿ.ಆರ್.ನಂದ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಉದ್ಯಮಿ ಎಡಿಕೇರಿ ಪ್ರಸನ್ನ ಕುಶಾಲಪ್ಪ ಭಾಗವಹಿಸಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಯುವ ಒಕ್ಕೂಟದ ಖಜಾಂಚಿ ಕುಂಜಿಲನ ಮೋಹನ್, ಕ್ರೀಡಾ ಸಮಿತಿ ಸಂಚಾಲಕ ಕಾವೇರಿ ಮನೆ ಭರತ್, ಶ್ರೀ ಕೃಷ್ಣ ಯುವಕ ಸಂಘದ ಗೌರವಾಧ್ಯಕ್ಷ ಜೀವನ್ ಕುಮಾರ್, ಕಾರ್ಯದರ್ಶಿ ಅಭಿಷೇಕ್ ಸುದ್ದಿಗೋಷ್ಠಿಯಲ್ಲಿದ್ದರು.








