ಸುಳ್ಯದ ಪಿಜಿಯಲ್ಲಿ ಕೊಡಗಿನ ವಿದ್ಯಾರ್ಥಿ ಆತ್ಮಹತ್ಯ
ಮಡಿಕೇರಿ : ವಿದ್ಯಾರ್ಥಿಯೋರ್ವ ತಾನು ತಂಗಿದ್ದ ಪಿಜಿಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕಲ್ಲುಬಾಣೆ ನಿವಾಸಿ ವಿಜು ಹಾಗೂ ಸುಮತಿ ದಂಪತಿಗಳ ಪುತ್ರ ಅಭಿ (20) ಯುವಕನೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.
ಪುತ್ರ ಸುಳ್ಯದಲ್ಲಿ ಶಿಕ್ಷಣ ಪಡೆಯುತ್ತಿದ್ದ ಈತ ತಂಗಿದ್ದ PG ಯಲ್ಲಿ ಇಂದು ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಇನ್ನೂ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪೊಲೀಸರ ತನಿಖೆಯ ಬಳಿಕವಷ್ಟೇ ಸತ್ಯಾಂಶ ಹೊರಬರಲಿದೆ.







