Breaking News :

ಜಮ್ಮಾಮಲೆ, ಸಿ & ಡಿ, ಜಮೀನು ಹಾಗೂ ವನ್ಯ ಜೀವಿ ಸಂಘರ್ಷಗಳ ಕುರಿತು ಅರಣ್ಯ ಸಚಿವರೊಂದಿಗೆ ಸಭೆ 

 


ಜನವಾಹಿನಿ NEWS ಮಡಿಕೇರಿ : ಜಮ್ಮಾಮಲೆ, ಸಿ & ಡಿ, ಜಮೀನು ಹಾಗೂ ವನ್ಯ ಜೀವಿ ಸಂಘರ್ಷಗಳ ಕುರಿತು ಅರಣ್ಯ ಸಚಿವರೊಂದಿಗೆ ಸಭೆ ನಡೆಯಿತು.

ಮಾನ್ಯ ಅರಣ್ಯ ಸಚಿವರಾದ ಶ್ರೀ ಈಶ್ವರ ಬಿ ಖಂಡ್ರೆರವರ ಕಛೇರಿಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್ . ಎಸ್ ಬೋಸರಾಜು, ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಶ್ರೀ ಎ. ಎಸ್ ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಅವರುಗಳ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಲಾಯಿತು.

ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಶ್ರೀ ಎ. ಎಸ್ ಪೊನ್ನಣ್ಣ ಮಾತನಾಡಿ, ಜಮ್ಮಾಮಲೆ ಹಿಡುವಳಿದಾರ ಆಸ್ತಿ ಹಕ್ಕು ರಕ್ಷಣೆ ಮತ್ತು ಅವರಿಗೆ ನ್ಯಾಯ ದೊರಕಬೇಕು. ನ್ಯಾಯಾಲಗಳಲ್ಲಿ ಆದೇಶವಾಗಿದೆ. ಈ ಬಗ್ಗೆ ಶ್ರೀಘ್ರವಾಗಿ ಕ್ರಮವಹಿಸಬೇಕೆಂದು ವಿವರಿಸಿದರು. ಮಾನ್ಯ ಸಚಿವರು ಕೂಡಲೇ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

ಸಿ & ಡಿ ಲ್ಯಾಂಡ್ ಬಗ್ಗೆ ಜಂಟಿ ಸರ್ವೆ ಮಾಡಿ ಹಿಡುವಳಿದಾರರಿಗೆ ನ್ಯಾಯ ಒದಗಿಸಬೇಕು.

ಕೊಡಗು ಜಿಲ್ಲೆಯಲ್ಲಿ ಆನೆಗಳ ಹಾವಳಿಯಿಂದ ಮಾನವನ ಪ್ರಾಣ ಹಾನಿಯನ್ನು ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟ ಬೇಕು, ಆನೆ ಮತ್ತು ಹುಲಿಯ ನಿರಂತರ ದಾಳಿಯಿಂದ ಕೊಡಗಿನ ರೈತಾಪಿ ಜನರು ಜೀವನ ಹಾನಿ ಉಂಟಾಗುತ್ತಿದೆ, ಜೊತೆ ಕೃಷಿ ನಷ್ಟವನ್ನು ಅನುಭವಿಸುತ್ತಿದ್ದಾರೆ. ಹುಲಿ ಮತ್ತು ಆನೆಗಳನ್ನು ಸ್ಥಳಾಂತರಿಸಿ ಜೀವ ಹಾನಿ ಉಂಟಾಗುವುದನ್ನು ಅಧಿಕಾರಿಗಳು ಶೀಘ್ರವಾಗಿ ತಡೆಗಟ್ಟಬೇಕೆಂದು ಸಭೆಯಲ್ಲಿ ಪ್ರಸ್ತಾಪಿಸಿದರು.

ಮಾನ್ಯ ಸಚಿವರು ಪ್ರತಿಕ್ರಿಯಿಸಿ ಅಧಿಕಾರಿಗಳು ಕೂಡಲೇ ಮಾನವನ ಪ್ರಾಣ ಹಾನಿಯಾಗದಂತೆ ಕ್ರಮ ವಹಿಸಿ, ಜನರಿಗೆ ಧೈರ್ಯ ತುಂಬಬೇಕು ನಿರಂತರವಾಗಿ ಗ್ರಾಮಗಳಿಗೆ ಭೇಟಿ ನೀಡಿ ಜನರಿಗೆ ಅರಿವು ಮಾಡಿಸಲು ಕಾರ್ಯಪ್ರವೃತ್ತರಾಗ ಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಭೆಯಲ್ಲಿ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ಜಮ್ಮಾಮಲೆ ಅಸೋಷಿಯೇಷನ್ ಪದಾಧಿಕಾರಿಗಳ ಉಪಸ್ಥಿತರಿದ್ದರು

Share this article

ಟಾಪ್ ನ್ಯೂಸ್

More News