ಜನವಾಹಿನಿ NEWS ಮಡಿಕೇರಿ : ಮಡಿಕೇರಿ ತಾಲ್ಲೂಕು ಪಂಚಾಯತ್ನಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಸಮಿತಿ ಸಭೆಯಲ್ಲಿ 2025ನೇ ಸಾಲಿನ ಯುವನಿಧಿ ನೋಂದಣಿ ಪ್ರಕ್ರಿಯೆ ಪ್ರಾರಂಭಗೊಂಡ ಪ್ರಯುಕ್ತ ಯುವನಿಧಿ ಪೋಸ್ಟರ್ ಮತ್ತು ಬ್ಯಾನರ್ಗಳನ್ನು ಅನಾವರಣ ಮಾಡಲಾಯಿತು.
ಉದ್ಯೋಗಾಧಿಕಾರಿ ಮಂಜುನಾಥ್ ಸಿ. ಬಿ ಅವರು ಮಾತಾನಾಡಿ 2023, 2024 ಮತ್ತು 25 ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪಡೆದು ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸದ ಅರ್ಹರು ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು. ಈಗಾಗಲೇ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಈ ಯೋಜನೆಯಡಿ ಭತ್ಯೆ ಪಡೆಯಲು ಮುಂದುವರಿಸಬೇಕಾಗಿದ್ದಲ್ಲಿ ಪ್ರತಿ ತ್ರೈಮಾಸಿಕದಂತೆ ತಾನು ಸಾರ್ವಜನಿಕ/ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಮಾಡುತ್ತಿಲ್ಲವೆಂದು ಮತ್ತು ಸ್ವಯಂ ಉದ್ಯೋಗ ಮಾಡುತ್ತಿಲ್ಲವೆಂದು, ಉನ್ನತ ವ್ಯಾಸಂಗವನ್ನು ಮುಂದುವರಿಸುತ್ತಿಲ್ಲವೆಂದು ಸ್ವಯಂ ಘೋಷಣೆಯನ್ನು ನೀಡಬೇಕಿದೆ.
ಯುವನಿಧಿ ಫಲಾನುಭವಿಗಳು ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ಉಚಿತ ಕೌಶಲ್ಯ ತರಬೇತಿಯನ್ನು ಪಡೆಯಬಹುದಾಗಿದ್ದು ವೆಬ್ಸೈಟ್ ವಿಳಾಸ https://www.kaushalkar.com/app/registration_verify ಅನ್ನು ಕ್ಲಿಕ್ ಮಾಡಿ ನೋಂದಾಯಿಸಿಕೊಳ್ಳುವುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ 1800- 599-7154 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಡಿಕೇರಿ, ಕಛೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.







