Breaking News :

ಜಿಲ್ಲೆಯ ವಿವಿಧ ಕಡೆ ಮದ್ಯ ಮಾರಾಟ ನಿಷೇಧ

 



ಜನವಾಹಿನಿ NEWS ಮಡಿಕೇರಿ : ಆಗಸ್ಟ್, 27 ರಿಂದ ಜಿಲ್ಲೆಯ ವಿವಿಧ ಕಡೆಗಳಲ್ಲಿ ಗೌರಿ-ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965 ರ ಕಲಂ 21 ರಲ್ಲಿ ದತ್ತವಾದ ಅಧಿಕಾರದಂತೆ ಆಗಸ್ಟ್, 27 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಹಾಕತ್ತೂರು ವ್ಯಾಪ್ತಿಯ 5 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತು ಬೆಟ್ಟಗೇರಿ ಗ್ರಾಮ ಪಂಚಾಯಿತಿ ಸುತ್ತಮುತ್ತಲಿನ 2 ಕಿ.ಮೀ. ವ್ಯಾಪ್ತಿಯಲ್ಲಿ, ಆಗಸ್ಟ್, 31 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ನಾಪೋಕ್ಲು ಸುತ್ತಮುತ್ತಲಿನ 15 ಕಿ.ಮೀ. ವ್ಯಾಪ್ತಿಯಲ್ಲಿ, ಸೆಪ್ಟೆಂಬರ್, 02 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮೂರ್ನಾಡು ನಗರದ ಸುತ್ತಮುತ್ತಲಿನ 8 ಕಿ.ಮೀ. ವ್ಯಾಪ್ತಿಯಲ್ಲಿ, ಸೆಪ್ಟೆಂಬರ್, 04 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಚೆಟ್ಟಳ್ಳಿ ಸುತ್ತಮುತ್ತ 2 ಕಿ.ಮೀ. ವ್ಯಾಪ್ತಿಯಲ್ಲಿ ಹಾಗೂ ಸೆಪ್ಟೆಂಬರ್, 07 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಚೆಟ್ಟಳ್ಳಿ ಸುತ್ತಮುತ್ತ 2 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.

Share this article

ಟಾಪ್ ನ್ಯೂಸ್

More News