Breaking News :

ಪುಲಿಯೇರಿ ಇಂಜಿಲಗೆರೆ ವಿನಾಯಕ ಮಿತ್ರ ಮಂಡಳಿಯಿಂದ ಗೌರಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ

 


ಸಿದ್ದಾಪುರ : ಗೌರಿ ಗಣೇಶ ಹಬ್ಬದ ಅಂಗವಾಗಿ ಸಿದ್ದಾಪುರ ಸಮೀಪದ ಪುಲಿಯೇರಿ ಇಂಜಲಗೆರೆ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ 3ನೇ ವರ್ಷದ ಗೌರಿ ಗಣೇಶ ಉತ್ಸವ ಮೂರ್ತಿಗಳ ಪ್ರತಿಷ್ಠಾಪನೆ ಬುಧವಾರ ನಡೆಯಿತು.

ಬೆಳಗ್ಗೆಯಿಂದಲೇ ದೇವರಿಗೆ ವಿಶೇಷ ಪೂಜೆ, ಮಹಾಗಣಪತಿ ಹೋಮ, ಮಂಗಳಾರತಿ, ನೆರವೇರಿಸಿ ಪ್ರತಿಷ್ಠಾಪನೆ ಮಾಡಲಾಯಿತು. ಪೂಜಾ ಕೈಂಕರ್ಯಗಳನ್ನು ಹೊಳೆನರಸಿಪುರದ ಸಂಜಯ್ ಭಟ್ಟರು ನೆರವೇರಿಸಿದರು. ಗಣಪನಿಗೆ ಹಣ್ಣುಹಂಪಲು ಲಾಡು ಇನ್ನಿತರ ಸಿಹಿ ತಿನಿಸುಗಳನ್ನು ಅರ್ಪಣೆ ಮಾಡಲಾಯಿತು. ಬಳಿಕ ನೆರೆದಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು. ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಹಿಳೆಯರು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿದರು.
ಈ ಸಂದರ್ಭ ವಿನಾಯಕ ಮಿತ್ರ ಮಂಡಳಿ ಸಹ ಕಾರ್ಯದರ್ಶಿ ಹಾಗೂ ಸ್ಥಳೀಯ ಗ್ರಾ.ಪಂ ಸದಸ್ಯರಾದ ನಿತೀಶ್ ಮಾತನಾಡಿ, ಸಮಿತಿ ವತಿಯಿಂದ 3ನೇ ವರ್ಷದ ಗಣೇಶೋತ್ಸವ ಅಂಗವಾಗಿ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು, ಪ್ರತಿ ದಿನ ಗಣಪನಿಗೆ ವಿಶೇಷ ಪೂಜೆ ನಡೆಯಲಿದೆ. ಮುಂದಿನ ಭಾನುವಾರ ಆ.31 ರಂದು ಅದ್ದೂರಿ ಮೂರ್ತಿಗಳ ವಿಸರ್ಜನ ಕಾರ್ಯಕ್ರಮ ನಡೆಯಲಿದೆ ಎಂದರು .
ವಿನಾಯಕ ಮಿತ್ರ ಮಂಡಳಿಯ ಅಧ್ಯಕ್ಷ ರೆಜಿಶ್, ಉಪಾಧ್ಯಕ್ಷ ರತೀಶ್, ಕಾರ್ಯದರ್ಶಿ ಶಶಿಕುಮಾರ್, ಖಜಾಂಚಿಗಳಾದ- ರೋಶಿತ್, ಮನೀಶ್ ಸೇರಿದಂತೆ ಸಮಿತಿಯ ಸದಸ್ಯರು ಪಾಲ್ಗೊಂಡಿದ್ದರು.

Share this article

ಟಾಪ್ ನ್ಯೂಸ್

More News