ಜನವಾಹಿನಿ NEWS ಪುತ್ತೂರು : ಮುಳಿಯ ಜ್ಯುವೆಲ್ಸ್ ನ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಶ್ಯಾಮ್ ಭಟ್ (71 ) ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತಿ ಶ್ಯಾಮ್ ಭಟ್, ಪುತ್ರರಾದ ಜ್ಯುವೆಲ್ಸ್‌ನ ಸಿಎಂಡಿ ಕೇಶವ ಪ್ರಸಾದ್ ಮುಳಿಯ, ಎಂಡಿ ಕೃಷ್ಣ ನಾರಾಯಣ ಮುಳಿಯ, ಪುತ್ರಿ, ಸೊಸೆಯಂದಿರು, ಅಳಿಯ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಮೃತರ ಅಂತಿಮ ಸಂಸ್ಕಾರವು ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಪಾಂಗಳಾಯಿ ಶ್ಯಾಮ್-ಸುಲೋಚನಾ ಭಟ್ ಅವರ ಮನೆಯ ತೋಟದಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.







