Breaking News :

ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಲೋಕಾಯುಕ್ತ ಉಪ ಅಧೀಕ್ಷಕರು

 

 


ಜನವಾಹಿನಿ NEWS ಮಡಿಕೇರಿ : ಕರ್ನಾಟಕ ಲೋಕಾಯುಕ್ತ ಕೊಡಗು ಉಪ ಅಧೀಕ್ಷರಾದ ದಿನಕರ ಶೆಟ್ಟಿ ಮತ್ತು ಪೊಲೀಸ್ ನಿರೀಕ್ಷಕರಾದ ವೀಣಾ ನಾಯ್ಕ್ ಅವರು ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಇಂದು ಭೇಟಿ ನೀಡಿ ಪರಿಶೀಲಿಸಿದರು.

ಶಿಕ್ಷಕರ ಗೈರು, ಗುಣಮಟ್ಟದ ಆಹಾರ ಪೂರೈಸುವುದು, ಶುಚಿತ್ವಕ್ಕೆ ಒತ್ತು ನೀಡುವುದು, ಶುದ್ಧ ಕುಡಿಯುವ ನೀರು ಪೂರೈಸುವುದು ಸೇರಿದಂತೆ ಹಲವು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.

ಮುಂದಿನ‌ ದಿನಗಳಲ್ಲಿ ವಸತಿ ಶಾಲೆಯಲ್ಲಿ ಯಾವುದೇ ರೀತಿಯ ದೂರು ಬರದಂತೆ ಗಮನಹರಿಸಬೇಕು. ಎಂದು ದಿನಕರ ಶೆಟ್ಟಿ ಅವರು ಸೂಚಿಸಿದರು. ವಸತಿ ಶಾಲೆಯ ಪ್ರಾಂಶುಪಾಲರು, ಸಿಬ್ಬಂದಿಗಳು ಇದ್ದರು.

Share this article

ಟಾಪ್ ನ್ಯೂಸ್

More News