Breaking News :

ವಿದ್ಯಾರ್ಥಿಗಳಲ್ಲಿ ಶಿಸ್ತೂ ಸಂಸ್ಕಾರವನ್ನು ಬೆಳೆಸುವಲ್ಲಿ ಸ್ಕೌಟ್-ಗೈಡ್ಸ್ ನ ಪಾತ್ರ ಮಹತ್ತರವಾದದ್ದು : ರೆ.ಫಾ.ಅವಿನಾಶ್

 


ಜನವಾಹಿನಿ NEWS ಸೋಮವಾರಪೇಟೆ : ವಿದ್ಯಾರ್ಥಿಗಳಲ್ಲಿ ಶಿಸ್ತೂ ಸಂಸ್ಕಾರವನ್ನು ಬೆಳೆಸುವಲ್ಲಿ ಸ್ಕೌಟ್-ಗೈಡ್ಸ್ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಸಂತ ಜೋಸೆಫರ ವಿದ್ಯಾ ಸಂಸ್ಥೆಯ ವ್ಯವಸ್ಥಾಪಕ ರೆ.ಫಾ.ಅವಿನಾಶ್ ಅಭಿಪ್ರಾಯಪಟ್ಟಿದ್ದಾರೆ

ಪಟ್ಟಣದ ಚನ್ನಬಸಪ್ಪ ಸಭಾಂಗಣದಲ್ಲಿ ನಡೆದ ಸ್ಕೌಟ್ ಮತ್ತು ಗೈಡ್ಸ್ ವಾರ್ಷಿಕ ಮಹಾಸಭೆ ಹಾಗೂ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆಯ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್ ವಹಿಸಿದ್ದರು, ಜಿಲ್ಲಾ ಗೈಡ್ ಆಯುಕ್ತರಾದ ಪದ್ಮಶ್ರೀ ಪ್ರಶಸ್ತಿ ವಿಜೇತೆ ರಾಣಿ ಮಾಚಯ್ಯ, ಜಿಲ್ಲಾ ಸ್ಕೌಟ್ ತರಬೇತಿ ಆಯುಕ್ತ ಕೆ.ಯು. ರಂಜಿತ್, ಮುಖ್ಯ ಶಿಕ್ಷಕಿ ಯಶೋಧ, ಶಿಕ್ಷಣ ಇಲಾಖೆಯ ಬಿ.ಆರ್.ಸಿ ದಯಾನಂದ್, ಶೀಲಾ ಡಿಸೋಜ, ಎಸ್.ಎಂ. ಡಿಸಿಲ್ವ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಜ್ಯೋತಿ ಅರುಣ್ ಕಾರ್ಯಕ್ರಮ ನಿರೂಪಿಸಿದರು.

Share this article

ಟಾಪ್ ನ್ಯೂಸ್

More News