Breaking News :

ಕಾಫಿ ಬೆಳೆಗಾರರಿಗೆ ಮಳೆ ಹಾನಿ ಪರಿಹಾರ ಒದಗಿಸಲು ಕ್ರಮ : ಸಚಿವ ಭೋಸರಾಜು

 


ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲೆಯ ಬೆಳೆಗಾರರಿಗೂ ಮಳೆ ಹಾನಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಪ್ರತಿಕ್ರಿಯಿಸಿದ್ದಾರೆ.

ಮಡಿಕೇರಿಯಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಉಂಟಾಗಿದೆ ಈ ಹಿನ್ನೆಲೆ ಉತ್ತರ ಭಾಗಕ್ಕೆ ಈಗಾಗಲೇ ಸಿಎಂ ಭೇಟಿ ನೀಡಿದ್ದಾರೆ.

ಎರಡೂವರೆ ಸಾವಿರ ಕೋಟಿ ಮಳೆಯಿಂದ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಪರಿಹಾರಕ್ಕಾಗಿ ಮೌಲ್ಯಮಾಪನ ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲೂ ಕಾಫಿ ಬೆಳೆಗಾರರಿಗೆ ಮಳೆಯಿಂದ ನಷ್ಟ ಆಗಿದೆ. ಹೀಗಾಗಿ ಅಧಿಕಾರಿಗಳು ಸಮೀಕ್ಷೆ ನಡೆಸಲ್ಲಿದ್ದು, ಅಧಿಕಾರಿಗಳು ಈ ಬಗ್ಗೆ ಸರಕಾರಕ್ಕೆ ವರದಿ ನೀಡಲ್ಲಿದ್ದಾರೆ ಬಳಿಕ ಬೆಳೆಗಾರರಿಗೆ ಪರಿಹಾರ ನೀಡಲು ಕ್ರಮ ವಹಿಸಲಾಗುತ್ತದೆ.

ಕಾಫಿ ಬೆಳೆಗಾರರಿಗೆ ಪರಿಹಾರ ಒದಗಿಸಲು ಕೇಂದ್ರ‌ ಸರಕಾರ ಹಾಗೂ ಕಾಫಿ ಬೋರ್ಡ್ ಕೂಡ ಸಹಕಾರ ನೀಡಬೇಕು ಎಂದು ಮಡಿಕೇರಿಯಲ್ಲಿ ಸಚಿವ ಭೋಸರಾಜು ಹೇಳಿದರು.

Share this article

ಟಾಪ್ ನ್ಯೂಸ್

More News