ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯೆ ಜಿ.ಆರ್.ಪುಷ್ಪಲತಾ ನೇಮಕಗೊಂಡಿದ್ದಾರೆ.
ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಅಲ್ಕಾ ಲಂಬಾ ರವರ ನಿರ್ದೇಶನದ ಮೇರೆಗೆ ಕರ್ನಾಟಕ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸೌಮ್ಯ ರೆಡ್ಡಿಯವರು ನೇಮಕಾತಿ ಆದೇಶ ಜಾರಿಗೊಳಿಸಿದ್ದಾರೆ.
ಪುಷ್ಪಲತಾ ರವರು ಈ ಹಿಂದೆ 2017-18 ರಲ್ಲಿ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು ಈಗ ಎರಡನೇ ಬಾರಿಗೆ ಕೊಡಗು ಮಹಿಳಾ ಕಾಂಗ್ರೆಸ್ ಸಾರಥ್ಯವನ್ನು ಹೊರಲಿದ್ದಾರೆ.






