Breaking News :

ನ.28 ರಂದು ಆಲದ ಗಿಡ ನೆಡುವ ಕಾರ್ಯಕ್ರಮ

 


ಜನವಾಹಿನಿ News ಮಡಿಕೇರಿ : ಕೊಡವ ಸಮಾಜ ವತಿಯಿಂದ ನವೆಂಬರ್, 28 ರಂದು ಬೆಳಗ್ಗೆ 8 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದ ಬಳಿ ಆಲದ ಗಿಡ ನೆಡುವ ಕಾರ್ಯಕ್ರಮ ನಡೆಯಲಿದೆ.

ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ, ಮಾಜಿ ಕಾನೂನು ಮಂತ್ರಿ ಮೇರಿಯಂಡ ಸಿ.ನಾಣಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, ಮಂಡೇಪಂಡ ಸುನಿಲ್ ಸುಬ್ರಮಣಿ, ಕೊಡವ ಸಮಾಜದ ಮಾಜಿ ಅಧ್ಯಕ್ಷರಾದ ಕೊಂಗಾಂಡ ಎಸ್.ದೇವಯ್ಯ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರಾದ ಮಂಡುವಂಡ ಪಿ.ಮುತ್ತಪ್ಪ ಅವರು ತಿಳಿಸಿದ್ದಾರೆ.

 

Share this article

ಟಾಪ್ ನ್ಯೂಸ್

More News