Breaking News :

ಕೊಡಗು : ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

 


ಜನವಾಹಿನಿ News ನಾಪೋಕ್ಲು : ಕಾಲೇಜು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಚೆರಿಯಪರಂಬು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ನಾಪೋಕ್ಲು ಬಳಿಯ ಚೆರಿಯಪರಂಬು ಗ್ರಾಮದ ಪೈಸಾರಿ ನಿವಾಸಿ ಗಣೇಶ್ ಹಾಗೂ ಜಾನಕಿ ದಂಪತಿಗಳ ಪುತ್ರಿ ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಚಿತ್ರ (17) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಕಳೆದ ಒಂದು ತಿಂಗಳಿಂದ ಚಿತ್ರ ಕಾಲೇಜಿಗೆ ಹೋಗದೆ ಮನೆಯಲ್ಲೇ ಇದ್ದಳು ಎಂದು ತಿಳಿದುಬಂದಿದೆ.

ಶುಕ್ರವಾರ ಬೆಳಿಗ್ಗೆ ತಂದೆ ತಾಯಿ ಕೆಲಸಕ್ಕೆ ತೆರಳಿದ ಸಂದರ್ಭ ಮನೆಯ ಕೋಣೆಯೊಳಗಿನ ಬಿಟ್ಟಕ್ಕೆ ವೇಲ್‌ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ತಂದೆ ಗಣೇಶ್ ನೀಡಿದ ದೂರಿನ ಅನ್ವಯ ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

Share this article

ಟಾಪ್ ನ್ಯೂಸ್

More News