ಜನವಾಹಿನಿ News ಮಡಿಕೇರಿ : ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ ಸರ್ಕಾರದ ಕೃಷಿ, ತೋಟಗಾರಿಕೆ, ಪಶು ಸಂಗೋಪಣೆ ಮತ್ತು ಪಶು ವೈದ್ಯಕೀಯ ಸೇವೆಗಳು, ಜಲಾನಯನ ಅಭಿವೃದ್ಧಿ, ರೇಷ್ಮೆ, ಅರಣ್ಯ, ಮೀನುಗಾರಿಕೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಬಾರ್ಡ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್, 05 ರಿಂದ ನಾಳೆಯಿಂದ 7 ವರೆಗೆ ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸಮಗ್ರ ಕೃಷಿಯಿಂದ ಸುಸ್ಥಿರತೆ ಎಂಬ ವಿಷಯದಡಿ ಕೃಷಿ ಮೇಳ-2025 ನಡೆಯಲಿದೆ. ನಾಳೆ ಬೆಳಗ್ಗೆ 10.30 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.







