Breaking News :

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ವೆಬ್‍ಸೈಟ್ www.indiapostgdsonline.gov.in ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅ.5 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.

ಈ ಎಲ್ಲ ಹುದ್ದೆಗಳಿಗೆ 10 ನೇ ತರಗತಿ ತೇರ್ಗಡೆ ಕಡ್ಡಾಯವಾಗಿದೆ. ಅಭ್ಯರ್ಥಿಗಳು ಗಣಿತ ಮತ್ತು ಇಂಗ್ಲಿಷ್‍ನಲ್ಲಿ ಕನಿಷ್ಟ ತೇರ್ಗಡೆ ಅಂಕ ಹೊಂದಿರಬೇಕು.

ಅಭ್ಯರ್ಥಿಯ ವಯೋಮಿತಿ 18 ರಿಂದ 40 ವರ್ಷದ ಒಳಗಿರಬೇಕು. ಅಂಕಗಳ ಆಧಾರದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

Share this article

ಟಾಪ್ ನ್ಯೂಸ್

More News