ಜನವಾಹಿನಿ News ಮಡಿಕೇರಿ : ಕೊಡಗು ಮೈಸೂರು ಲೋಕಸಭಾ ಕ್ಷೇತ್ರದಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡಯರ್ ರವರನ್ನು ಕೊಡಗು ಜಿಲ್ಲೆಯ ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರು ಭೇಟಿಯಾಗಿ ವಿವಿಧ ಬೇಡಿಕೆಗಳಿಗೆ ಮನವಿ ಸಲ್ಲಿಸಿದರು.
ಅಲ್ಪಸಂಖ್ಯಾತ ಸಮುದಾಯದ ಸಮುದಾಯ ಭವನ,ಮಸೀದಿ, ಕಬರ್ ಸ್ಥಾನಗಳಿಗೆ ,ತಡೆಗೋಡೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಂಸದರಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ವಿರಾಜಪೇಟೆ ತಾಲೂಕು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸೈಫುದ್ದಿನ್ ಚಾಮಿಯಾಲ,ಕುಶಾಲನಗರ ತಾಲೂಕು ಅಲ್ಪಸಂಖ್ಯಾತ ಅಧ್ಯಕ್ಷ ಶಿಯಾಬುದ್ದೀನ್, ವಿ.ಪಿ.ಎ.ಸ್ ನೆಲ್ಯಹುದಿಕೇರಿ ಮಡಿಕೇರಿ ತಾಲೂಕು ಅಲ್ಪಸಂಖ್ಯಾತ ಅಧ್ಯಕ್ಷ ಅಶ್ರಫ್ ಹಾಕತ್ತೂರ್, ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯದರ್ಶಿ ಅಬಿದ್ ಹುಸೈನ್ ಮೈಸೂರು ಇದ್ದರು.







