ಜನವಾಹಿನಿ News ಸಿದ್ದಾಪುರ : ಸಿದ್ದಾಪುರ :ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು ಗ್ರಾಮದ ನಿವಾಸಿ ಕಾಂತರಾಜ್ ರವರ ತಾಯಿ ಸಿದ್ದಮ್ಮ (80) ಅವರು ಡಿ. 25ರಂದು ಮನೆ ಮಂದಿಗೆ ತಿಳಿಸದೆ ಹೊರಟು ಹೋಗಿದ್ದಾರೆ ಎನ್ನಲಾಗಿದೆ. ಈ ಕುರಿತು ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಲ್ಲಾದರು ಪತ್ತೆಯಾದರೆ ಸಿದ್ದಾಪುರ ಪೊಲೀಸ್ ಠಾಣೆಗೆ 9480804950 ಅಥವಾ ಕೊಡಗು ಜಿಲ್ಲಾ ಪೊಲೀಸ್ ನಿಯಂತ್ರಣ ಕೊಠಡಿಗೆ 08272-228330, ಮಾಹಿತಿ ನೀಡುವಂತೆ ಕೋರಲಾಗಿದೆ.







