ಜನವಾಹಿನಿ News ಮಡಿಕೇರಿ : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು, ಪೆರಾಜೆ ಗ್ರಾಮಕ್ಕೆ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಭೇಟಿ ನೀಡಿದರು.
ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ನೂತನ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಮಾನ್ಯ ಶಾಸಕರು, ಸರಕಾರ ವತಿಯಿಂದ ಈಗಾಗಲೇ ತಮ್ಮ ಅವಧಿಯಲ್ಲಿ ಪೆರಾಜೆ ಗ್ರಾಮಕ್ಕೆ ಸುಮಾರು ₹ 19 ಕೋಟಿಗೂ ಅಧಿಕ ಅನುದಾನ ಅಭಿವೃದ್ಧಿ ಕಾಮಗಾರಿಗಾಗಿ ನೀಡಲಾಗಿದೆ ಎಂದು ಹೇಳಿದರು.









