Breaking News :

ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮನ್ ರೇಗಾ ಬಚಾವ್ ಸಂಗ್ರಾಮ : ಬಡವರ ಮೇಲೆ ಬಿಜೆಪಿ ದಾಳಿ : ಶಾಸಕ ಪೊನ್ನಣ್ಣ ಆರೋಪ 


ಜನವಾಹಿನಿ News ವಿರಾಜಪೇಟೆ : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ)ಯಿಂದ ಮಹಾತ್ಮಗಾಂಧಿ ಹೆಸರನ್ನು ಕೈಬಿಟ್ಟಿರುವ ಕೇಂದ್ರ ಸರ್ಕಾರದ ವಿರುದ್ಧ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಕಾವೇರಿ ಕಾಲೇಜು ಸಮೀಪದಿಂದ ಆರಂಭವಾದ ಮನ್ ರೇಗಾ ಬಚಾವ್ ಸಂಗ್ರಾಮದ ಪಾದಯಾತ್ರೆಯು ವಿರಾಜಪೇಟೆ ಕಾರುನಿಲ್ದಾಣದಲ್ಲಿ ಸಮಾರೋಪಗೊಂಡಿತು. ಈ ವೇಳೆ ಪ್ರತಿಭಟನಾನಿರತರು ಕೇಂದ್ರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು.

ಬೃಹತ್ ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ ಪೊನ್ನಣ್ಣ, ಬಡವರ ಕಲ್ಯಾಣಕ್ಕಾಗಿ ಮನರೇಗಾ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿತ್ತು. ಇದರಿಂದ ದೇಶದ ಕೋಟ್ಯಂತರ ಬಡವರಿಗೆ ನೆರವಾಗಿದೆ. ಈ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ಪರೋಕ್ಷವಾಗಿ 1 ರದ್ದುಪಡಿಸಿದ್ದು ಮಾತ್ರವಲ್ಲದೆ ದೇಶದ ಬಡವರ ಮೇಲೆ ದಾಳಿ ನಡೆಸಿದೆ. ದೇಶದ ಕಟ್ಟಡ ಕಡೆಯ ವ್ಯಕ್ತಿಗೂ ಅನ್ಯಾಯ ಮಾಡಿದೆ ಎಂದು ಆರೋಪಿಸಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರ ನರೇಗಾ ಯೋಜನೆಗೆ ಕತ್ತರಿ ಹಾಕುವ ಮೂಲಕ ಮಹಾತ್ಮಾ ಗಾಂಧಿ ಹೆಸರನ್ನು ಅಳಿಸಿದ್ದು ಮಾತ್ರವಲ್ಲದೆ ದೇಶದ ಕಟ್ಟಕಡೆಯ ವ್ಯಕ್ತಿಗೂ ಅನ್ಯಾಯ ಮಾಡಿದೆ. ಜಿಲ್ಲೆಗೆ ಇದುವರೆಗೆ ನರೇಗಾ ಯೋಜನೆಯ ಮೂಲಕ ರು.260 ಕೋಟಿ ಕೂಲಿ ನೀಡಲಾಗಿದೆ. ಕೇಂದ್ರದ ಹೊಸ ಕಾನೂನಿನ ಪ್ರಕಾರ ಮುಂದಿನ ದಿನಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಿಂದ ಯಾವುದೇ ಕೂಲಿ, ಕಾಮಗಾರಿ ನಡೆಯುವುದು ಸಾಧ್ಯವಿಲ್ಲ. ಕೇಂದ್ರದ ನಿರ್ಧಾರದ ವಿರುದ್ಧ ಪಕ್ಷಾತೀತವಾಗಿ ದೇಶಾದ್ಯಂತ ಹೋರಾಟ ನಡೆಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಬಡವರ ಪರ ಕಾಂಗ್ರೆಸ್ ಮಾತ್ರ ಎಂಬುದನ್ನು ದೇಶದ ಜನತೆ ಅರ್ಥಮಾಡಿಕೊಂಡಿದ್ದಾರೆ ಎಂದುರು.

ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಜನತೆಗೆ ಉಪಯೋಗವಾಗುವ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಆದರೆ ಈ ಹಿಂದೆ ಕಾಂಗ್ರೆಸ್ ಜಾರಿಗೊಳಿಸಿದ ಜನಪಯೋಗಿ ಯೋಜನೆಗಳನ್ನು ಇದೀಗ ಬಿಜೆಪಿ ಸರ್ಕಾರ ಹಾಳುಗೆಡವುತ್ತಿರುವುದು ದುರದೃಷ್ಟಕರ ಎಂದರು.

ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ. ಎಸ್. ಅರುಣ್ ಮಾಚಯ್ಯ, ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷಧರ್ಮಜ ಉತ್ತಪ್ಪಮಾತನಾಡಿದರು. ವಿರಾಜಪೇಟೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಪ್ರಚಾರ ಸಮಿತಿ ಅಧ್ಯಕ್ಷ ಎಸ್.ಎಚ್ ಮತಿನ್, ಪುರಸಭೆ ಮಾಜಿ ಸದಸ್ಯರಾದ ರಾಜೇಶ್ ಪದ್ಮನಾಭ, ಮಹಮ್ಮದ್ ರಾಫಿ, ಅಲ್ಪಸಂಖ್ಯ ತರ ಘಟಕದ ಅಧ್ಯಕ್ಷ ಹನೀಫ್, ಕೊಳುಮಂಡ ರಫಿಕ್, ವಕ್ತಾರ ತೆನ್ನಿರ ಮೈನಾ, ಪುರಸಭೆ ಮಾಜಿ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಜಗದೀಶ್ ಕಾಣತಂಡ, ಪಟ್ಟಡ ರಕ್ಷಿತ್, ಶಬೀರ್‌ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

Share this article

ಟಾಪ್ ನ್ಯೂಸ್

More News