Breaking News :

ಹಿಂದೂ ಸಮಾವೇಶ ಪ್ರಚಾರ ವೇಳೆ ವ್ಯಕ್ತಿ ಮೇಲೆ ಹಲ್ಲೆ : ಆರೋಪಿ ಬಂಧನಕ್ಕೆ ಆಗ್ರಹಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ 

 

 


ಜನವಾಹಿನಿ News ಮಡಿಕೇರಿ : ಬಲ್ಲಮಾವಟಿಯಲ್ಲಿ ನಾಳೆ ನಡೆಯಲಿರುವ ಹಿಂದು ಸಮಾವೇಶ ಹಿನ್ನೆಲೆ ಪ್ರಚಾರ ನಡೆಸುತ್ತಿದ್ದ ಸಂದರ್ಭ ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ  ಅನ್ಯ ಕೋಮಿನ ವ್ಯಕ್ತಿಯೋರ್ವನಿಂದ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ನಾಪೋಕ್ಲುವಿನಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ಪ್ರಚಾರ ವೇಳೆ ಮಾತಿನ ಚಕಮಕಿ ಉಂಟಾಗಿ ಸಿದ್ದೀಕ್ ಎಂಬಾತ ಹಲ್ಲೆ ಮಾಡಿದ್ದಾನೆ ಎನ್ನಲಾಗಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು  ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ನೀಡಲಾಗಿದೆ.

ಹಲ್ಲೆ ಘಟನೆ ಹಿನ್ನೆಲೆ ನಾಪೋಕ್ಲುವಿನಲ್ಲಿ ಹಿಂದೂ ಸಂಘಟನೆಗಳಿಂದ ರಸ್ತೆ ತಡೆ ಪ್ರತಿಭಟನೆ ನಡೆಸಲಾಗಿದ್ದು, ಸ್ಥಳಕ್ಕೆ ಹಿರಿಯ ಪೋಲಿಸ್‌ ಅಧಿಕಾರಿಗಳು ಬರುವಂತೆ ಪ್ರತಿಭಟನಾಕಾರರು ಒತ್ತಾಯ ಮಾಡಿದ್ದಾರೆ. ಇದರಿಂದ ನಾಪೋಕ್ಲುವಿನಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ.

Share this article

ಟಾಪ್ ನ್ಯೂಸ್

More News