Breaking News :

ಕಾಡಾನೆ ದಾಳಿಗೆ ಮೃತಪಟ್ಟ ಜಲಜಾಕ್ಷಿ ನಿವಾಸಕ್ಕೆ ಶಾಸಕ ಮಂತರ್ ಗೌಡ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

 


ಜನವಾಹಿನಿ News ಮಡಿಕೇರಿ : ಕಾಡಾನೆ ದಾಳಿಯಿಂದ ಮೃತಪಟ್ಟ ಜಲಜಾಕ್ಷಿ ಅವರ ಬಾಳೆಗುಂಡಿ ಹಾಡಿ ನಿವಾಸಕ್ಕೆ ಶಾಸಕ ಡಾ.ಮಂತರ್ ಗೌಡ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಇದೆ ಸಂದರ್ಭ ಮೊದಲ ಹಂತದ 5 ಲಕ್ಷ ಮೊತ್ತ ಪರಿಹಾರ ಚೆಕ್‌ ವಿತರಿಸಿದರು.

ಬಳಿಕ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕರು ಕಾಡಾನೆ ಸೆರೆ ಸೇರಿದಂತೆ ಆನೆ ಹಾವಳಿ ನಿಯಂತ್ರಣ ಸಂಬಂಧ ಅರಣ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಶೀಘ್ರ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಈ ಸಂದರ್ಭ ಅರಣ್ಯಾಧಿಕಾರಿಗಳು, ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ತಾಲೂಕು ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ವಿ.ಪಿ ಶಶಿಧರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಹಾಗೂ ಹಾಲಿ ಜಿಲ್ಲಾ ಕೆಡಿಪಿ ಸದಸ್ಯೆ ಸುನೀತಾ ಮಂಜುನಾಥ್, ತಾಲೂಕು ಕೆಡಿಪಿ ಸದಸ್ಯ ಹನೀಫ್.ಎ.ಎಂ , ಸೇರಿದಂತೆ ವಾಲ್ನೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ, ಸದಸ್ಯರು, ಮತ್ತು ಕಾಂಗ್ರೆಸ್ ಪ್ರಮುಖರು ಉಪಸ್ಥಿತರಿದ್ದರು.

 

Share this article

ಟಾಪ್ ನ್ಯೂಸ್

More News