Breaking News :

ಮಾ.23 ರಂದು ದೇವರ ದಾಸಿಮಯ್ಯ ಜಯಂತಿ

 


ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಮಾ.23 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ ನಡೆಯಲಿದೆ.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿ.ಪಂ.ಆಡಳಿತಾಧಿಕಾರಿಗಳು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್,

ಜಿಲ್ಲಾ ನೇಕಾರರ ಒಕ್ಕೂಟದ ಅಧ್ಯಕ್ಷರಾದ ಟಿ.ಕೆ.ಪಾಂಡುರಂಗ, ರಾಜ್ಯ ನೇಕಾರರ ಒಕ್ಕೂಟದ ನಿರ್ದೇಶಕರಾದ ಡಿ.ಕೆ.ತಿಮ್ಮಪ್ಪ, ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷರಾದ ಡಿ.ವಿ.ಜಗದೀಶ, ಸೋಮವಾರಪೇಟೆ ತಾಲ್ಲೂಕು ನೇಕಾರ ಒಕ್ಕೂಟದ ಅಧ್ಯಕ್ಷರಾದ ಸತ್ಯೇಂದ್ರ, ಕುಶಾಲನಗರ ಕುರುವಿನ ಶೆಟ್ಟಿ ಸಮಾಜದ ಅಧ್ಯಕ್ಷರಾದ ಸುದೀಪ್ ಕುಮಾರ್ ಬಿ.ಕೆ., ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷರಾದ ಬಿ.ಎಸ್.ಲೋಕೇಶ್ ಸಾಗರ್, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಇತರರು ಪಾಲ್ಗೊಳ್ಳಲಿದ್ದಾರೆ.

Share this article

ಟಾಪ್ ನ್ಯೂಸ್

More News