Breaking News :

ಕಾನೂರು : ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಪೊನ್ನಣ್ಣನವರಿಂದ ಭೂಮಿ ಪೂಜೆ

 


ಜನವಾಹಿನಿ News ಮಡಿಕೇರಿ : ಪೊನ್ನಂಪೇಟೆ ತಾಲೂಕಿನ ಕಾನೂರು ಗ್ರಾಮಕ್ಕೆ ಇಂದು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭೇಟಿ ನೀಡಿದರು.

ಪೊನ್ನಂಪೇಟೆ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಯುಕ್ತ ಪ್ರವಾಸ ಕೈಗೊಂಡಿರುವ ಮಾನ್ಯ ಶಾಸಕರು, ಕಾನೂರು ಗ್ರಾಮ ಪಂಚಾಯತ್ ಭಾಗದಲ್ಲಿ, ಚೊಟ್ಟೆಕಮಾಡ ಹಾಗೂ ಚೇಂದಿರ ಕುಟುಂಬಸ್ಥರ ಮನೆಗೆ ಹೋಗುವ ರಸ್ತೆ ಅಭಿವೃದ್ಧಿಗೆ ₹ 5 ಲಕ್ಷ ನೀಡಿದ್ದು, ಸದರಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಮಾನ್ಯ ಶಾಸಕರು, ಸಾರ್ವಜನಿಕರ ಮೂಲಭೂತ ಸೌಲಭ್ಯದ ಕಡೆಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ. ಆ ಪ್ರಯುಕ್ತ ಕ್ಷೇತ್ರಾದ್ಯಂತ ಗ್ರಾಮೀಣ ರಸ್ತೆಯ ಅಭಿವೃದ್ಧಿಗೆ ಅನುದಾನವನ್ನು ಒದಗಿಸುತ್ತಿದ್ದು, ಗುಣಮಟ್ಟದ ಕಾಮಗಾರಿಯಾಗುವುದರೊಂದಿಗೆ ಸಾರ್ವಜನಿಕರಿಗೆ ದೀರ್ಘಕಾಲದ ರಸ್ತೆ ಒದಗಿಸುವುದು ತನ್ನ ಹಾಗೂ ರಾಜ್ಯ ಸರ್ಕಾರದ ಉದ್ದೇಶ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷರು ಮಿದೇರಿರ ನವೀನ್, ವಲಯ ಅಧ್ಯಕ್ಷರು ರಮೇಶ್, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರು ಟಾಟು ಮೊಣ್ಣಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಬಾನಂಡ ಪ್ರತ್ಯು, ಕಾನೂರು ಪಂಚಾಯಿತಿ ಸದಸ್ಯರು ಬೋಪಣ್ಣ, ಸ್ಥಳೀಯ ಪ್ರಮುಖರು ಸಿದ್ದು ನಾಚಪ್ಪ, ಮನು, ಸುನಿಲ್, ನಿಖಿಲ್, ಸರು ಹಾಗೂ ಪಕ್ಷದ ಪ್ರಮುಖರು ಅಜ್ಜಿಕುಟ್ಟಿರ ಪೊನ್ನು, ಗಿರೀಶ್, ದಿಲ್ಲು, ಸುಕು ಬೋಪಣ್ಣ, ಸಾಜಿ ಅಚ್ಚುತನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Share this article

ಟಾಪ್ ನ್ಯೂಸ್

More News