ಜನವಾಹಿನಿ News ಸಿದ್ದಾಪುರ : ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಲ್ದಾರೆ ಸರ್ಕಾರಿ ಶಾಲೆಯ ಮುಂಭಾಗದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಆಟೋ ಅಪಘಾತದಲ್ಲಿ ಆಟೋ ಚಾಲಕ ಸಾವನ್ನಪ್ಪಿದ್ದು ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಂಚೆತಿಟ್ಟು ಹಾಡಿಯ ನಿವಾಸಿ ವೈ.ಎನ್. ಮಾದ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಸುನೀಲ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಟೋ ವಾಹನವು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಸಿದ್ದಾಪುರ ರಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






