ಜನವಾಹಿನಿ NEWS ಪೊನ್ನಂಪೇಟೆ : ದೇಶದ ಪ್ರಧಾನಿಯನ್ನು ಅವಾಚ್ಯ ಶಬ್ಧಗಳಿಂದ ನಿಂಧಿಸಿದ ವ್ಯಕ್ತಿಯ ವಿರುದ್ಧ ಪೊನ್ನಂಪೇಟೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೇಶದ ಪ್ರಧಾನಿ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಸಂಬಂಧ ಮಾಜಿ BSNL ಕೆಲಸಗಾರ ಪವಿತ್ರನ್ ಎಂಬುವವರ ವಿರುದ್ದ ಬಿಜೆಪಿ ಪ್ರಮುಖರು ಪೋನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ವಿರಾಜಪೇಟೆ ಮಂಡಲ ಕಾರ್ಯದರ್ಶಿ ಕೋಟೆರ ಕಿಶನ್, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷರು ದಿನೇಶ್ ಚೋಡುಮಾಡ, ರೈತ ಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್ ಅಲೆಮಾಡ, ಪೋನ್ನಂಪೇಟೆ ಗ್ರಾಮ ಪಂಚಾಯತ್ ಸದಸ್ಯರು ಮಧು ಮೂಕೇಳೆರ ಉಪಸ್ಥಿತರಿದ್ದರು
Total Views: 31







