ಜನವಾಹಿನಿ NEWS ಮಡಿಕೇರಿ : ರಾಜ್ಯಾದ್ಯಂತ ನಡೆಯುತ್ತಿರುವ ಎಸ್ಐಆರ್ ಕಾರ್ಯಕ್ರಮದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಇಂದು ಭಾಗವಹಿಸಿದರು.
ಪೊನ್ನಂಪೇಟೆ ತಾಲೂಕು ಹುದಿಕೇರಿಯ ಬೆಳ್ಳೂರಿನಲ್ಲಿರುವ ಶಾಸಕರ ನಿವಾಸದಲ್ಲಿ ಎಸ್ಐಆರ್ (SIR) ಅರ್ಜಿ ಭರ್ತಿ ಮಾಡುವ ಮೂಲಕ, ಮಾನ್ಯ ಶಾಸಕರು ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.
ಬಳಿಕ ಸಾರ್ವಜನಿಕರಿಗೆ ಕರೆ ನೀಡಿದ ಮಾನ್ಯ ಶಾಸಕರು, ಉತ್ತಮ ಸಮಾಜ ನಿರ್ಮಾಣಕ್ಕೆ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು. ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಲು ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಇರಲೇಬೇಕು. ಮತದಾನ ಎಂಬುವುದು ಪ್ರತಿಯೊಬ್ಬ ಭಾರತೀಯ ನಾಗರಿಕನ ಪ್ರಮುಖ ಹಕ್ಕು ಮತ್ತು ಇದನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ ಹಾಗೂ ಯಾರು ಇದನ್ನು ಕಸಿದುಕೊಳ್ಳದಂತೆ ನಾವುಗಳು ಜಾಗೃತಿ ವಹಿಸಿಕೊಳ್ಳಬೇಕು. ಹಾಗಾಗಿ ಪ್ರತಿಯೊಬ್ಬರೂ ಅಗತ್ಯ ದಾಖಲೆಗಳನ್ನು ನೀಡಿ ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪೊನ್ನಂಪೇಟೆ ತಹಶೀಲ್ದಾರ್ ಸಂಜನಾ, ವಿರಾಜಪೇಟೆ ತಹಶೀಲ್ದಾರ್ ಪ್ರವೀಣ್, ಪ್ರಮುಖರಾದ ಪಟ್ಟಡ ರಂಜಿ ಪೂಣಚ್ಚ, ಅಜ್ಜಿಕುಟ್ಟಿರ ಗಿರೀಶ್, ಕುಂಡಚ್ಚಿರ ಮಂಜು ದೇವಯ್ಯ, ನರೇಂದ್ರ ಕಾಮತ್ ಉಪಸ್ಥಿತರಿದ್ದರು.







