ಜನವಾಹಿನಿ ನ್ಯೂಸ್ ಸಿದ್ದಾಪುರ : ಮಡಿಕೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪಾಲಿಬೆಟ್ಟದ ಲೂರ್ಡ್ಸ್ ಹಿಲ್ ಕಾನ್ವೆಂಟ್ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ಶಾಲೆಯ 8ನೇ ತರಗತಿಯ ವಿದ್ಯಾರ್ಥಿ *ರೋಹನ್ ಎನ್.ಆರ್.* ಅವರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. 100 ಮೀಟರ್ ಓಟದ ಸ್ಪರ್ಧೆಯಲ್ಲಿ *ಪ್ರಥಮ ಸ್ಥಾನ* ಹಾಗೂ ಎತ್ತರ ಜಿಗಿತ ಸ್ಪರ್ಧೆಯಲ್ಲಿ *ದ್ವಿತೀಯ ಸ್ಥಾನ* ಗಳಿಸಿ, ಎರಡು ಪದಕಗಳೊಂದಿಗೆ *ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.*
ಇದೇ ಶಾಲೆಯ ಮತ್ತೊಬ್ಬ ವಿದ್ಯಾರ್ಥಿನಿ *ರಿಚೆಲ್ ವಾಜ್* ಅವರು ಉದ್ದ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಗಳ ಈ ಕ್ರೀಡಾ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ದೈಹಿಕ ಶಿಕ್ಷಕರು ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಯಶಸ್ಸು ಗಳಿಸಲಿ ಎಂದು ಶುಭ ಹಾರೈಸಿದ್ದಾರೆ.
Total Views: 15







