Breaking News :

ಹಾಲಿನ ದರ ಏರಿಕೆ ಖಂಡಿಸಿ ನ.2ರಂದು ಬಿಜೆಪಿಯಿಂದ ಪ್ರತಿಭಟನೆ

 


ಜನವಾಹಿನಿ ನ್ಯೂಸ್ ಮಡಿಕೇರಿ : ಹಾಲಿನ ದರವನ್ನು ದಿಢೀರ್ ಏರಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸಿ ನಾಳೆ ನವೆಂಬರ್ 2, ಸೋಮವಾರ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಯಲಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರೈತರಿಗೆ ಬೆಂಬಲ ಬೆಲೆ ನೀಡುವುದಾಗಿ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಈಗ ಗ್ರಾಹಕರಿಗೆ ಅನ್ಯಾಯ ಮಾಡಿದೆ. ಹಾಲಿನ ದರ ಏರಿಕೆಯಿಂದ ರೈತರಿಗೆ ಲಾಭವಾಗುವುದನ್ನು ಸ್ವಾಗತಿಸುತ್ತೇವೆ, ಆದರೆ 8 ರೂ. ಏರಿಕೆಯ ಹೊರೆಯನ್ನು ಜನರ ಮೇಲೆ ಹಾಕಿರುವುದು ಸರಿಯಲ್ಲ. ಇದನ್ನು ಸರ್ಕಾರವೇ ಭರಿಸಬೇಕಿತ್ತು ಎಂದು ಜಿಲ್ಲಾ ಬಿಜೆಪಿ ಆರೋಪಿಸಿದೆ.

ಪ್ರತಿಭಟನೆಯಲ್ಲಿ ಶಾಸಕರು, ಮಾಜಿ ಶಾಸಕರು, ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳು, ಎಲ್ಲಾ ಮೋರ್ಚಾಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share this article

ಟಾಪ್ ನ್ಯೂಸ್

More News