Breaking News :

ಮಡಿಕೇರಿಯಲ್ಲಿ ನ. 2, 3 ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ

 


ಜನವಾಹಿನಿ ನ್ಯೂಸ್ ಮಡಿಕೇರಿ :  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನ. 2 ಹಾಗೂ 3 ರಂದು ಮಡಿಕೇರಿಯಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ ಎಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನ, ಜಿ. ತಿಮ್ಮಯ್ಯ ಕ್ರೀಡಾಂಗಣ ಹಾಗೂ ಪೊಲೀಸ್ ಕವಾಯತ್ ಮೈದಾನದಲ್ಲಿ ಏಕಕಾಲದಲ್ಲಿ ಲೀಗ್ ಮಾದರಿಯಲ್ಲಿ ಪಂದ್ಯಾಟ ನಡೆಯಲಿದ್ದು, ಕೊಡಗಿನ 2 ತಂಡಗಳು ಸೇರಿದಂತೆ ರಾಜ್ಯದ ಒಟ್ಟು 24 ತಂಡಗಳು ಭಾಗವಹಿಸಲಿವೆ.

ನ. 2 ರಂದು ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ. ನರೇಂದ್ರಸ್ವಾಮಿ ಅವರು ಪಂದ್ಯಾವಳಿ ಉದ್ಘಾಟಿಸಲಿದ್ದಾರೆ.

ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕರಾದ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಸಂಸದ ಯದುವೀರ್ ಒಡೆಯರ್, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ, ರಿಪಬ್ಲಿಕ್ ನೆಟ್‌ವರ್ಕ್ ಅಧ್ಯಕ್ಷ, ಟ್ರೋಫಿ ದಾನಿ ಚೇರಂಡ ಕಿಶನ್ ಮಾದಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಮಾಜಿ ಶಾಸಕರುಗಳಾದ ಕೆ.ಜಿ. ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಫೀ.ಮಾ. ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಪ್ರೊ. ಬಿ. ರಾಘವ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರಾದ ಬಿ.ಆರ್. ಸವಿತಾ ರೈ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ಉಪಾಧ್ಯಕ್ಷರುಗಳಾದ ಹೆಚ್.ಬಿ. ಮದನ್ ಗೌಡ, ಮತ್ತಿಕೆರೆ ಜಯರಾಮ್, ಕಾರ್ಯದರ್ಶಿಗಳಾದ ಪುಂಡಲೀಕ ಭೀ ಬಾಳೋಜಿ, ಸೋಮಶೇಖರ್ ಕೆರೆಗೋಡು, ನಿಂಗಪ್ಪ ಚಾವಡಿ, ಖಜಾಂಚಿ ವಾಸುದೇವ್ ಹೊಳ್ಳ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಅವರುಗಳ ಗೌರವ ಉಪಸ್ಥಿತಿ ಇರಲಿದೆ.

ನ. 2 ರಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನಾಯಕತ್ವದ ಮಾಜಿ ಶಾಸಕರುಗಳು, ರಾಜಕಾರಣಿಗಳನ್ನು ಒಳಗೊಂಡ ರಾಜಕಾರಣಿಗಳ ತಂಡ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ನಾಯಕತ್ವದ ಪತ್ರಕರ್ತರ ತಂಡದ ನಡುವಿನಲ್ಲಿ ಪ್ರದರ್ಶನ ಪಂದ್ಯ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ನ. 3 ರಂದು ಮಧ್ಯಾಹ್ನ 3 ಗಂಟೆಗೆ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಮಡಿಕೇರಿ ಶಾಸಕರಾದ ಡಾ. ಮಂತರ್ ಗೌಡ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಶಾಸಕ ಎ.ಎಸ್. ಪೊನ್ನಣ್ಣ, ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ತ್ಯಾಗರಾಜ್, ಮುಖ್ಯಮಂತ್ರಿಗಳ ಮಾಜಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಉದ್ಯಮಿ, ದಾನಿಗಳಾದ ಅವೆರೆಮಾದಂಡ ಶರತ್ ಪೂಣಚ್ಚ, ಎಡಿಕೇರಿ ಪ್ರಸನ್ನ, ಮುದ್ದಂಡ ರಶಿನ್ ಸುಬ್ಬಯ್ಯ, ಕೊಡಗು ಹೋಟೆಲ್, ರೆಸಾರ್ಟ್ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ, ಹೋಂಸ್ಟೇ ಅಸೋಸಿಯೇಷನ್ ಮಾಜಿ ಅಧ್ಯಕ್ಷ ಮೋಂತಿ ಗಣೇಶ್, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಶಶಿಧರ್, ವಾರ್ತಾಧಿಕಾರಿ ಚಿನ್ನಸ್ವಾಮಿ, ಬ್ರಹ್ಮಗಿರಿ ವಾರಪತ್ರಿಕೆ ಸಂಪಾದಕ ಡಾ. ಉಳ್ಳಿಯಡ ಎಂ. ಪೂವಯ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ವಿರಾಜಪೇಟೆ ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಆರ್.ಕೆ. ಅಬ್ದುಲ್ ಸಲಾಂ, ಎಸ್.ಎಸ್.ಎಲ್.ಸಿ. ಅಧ್ಯಕ್ಷ ವಿ.ಕೆ. ಲೋಕೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರಾದ ಬಿ.ಆರ್. ಸವಿತಾ ರೈ, ರಾಷ್ಟ್ರೀಯ ಸಮಿತಿ ಸದಸ್ಯ ಪಳೆಯಂಡ ಪಾರ್ಥ ಚಿಣ್ಣಪ್ಪ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್, ವಿರಾಜಪೇಟೆ ತಾಲೂಕು ಅಧ್ಯಕ್ಷ ರೆಜಿತ್ ಕುಮಾರ್, ಕುಶಾಲನಗರ ತಾಲೂಕು ಅಧ್ಯಕ್ಷ ಎಂ.ಎಚ್. ಚಂದ್ರಮೋಹನ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ವಿಶ್ವ ಕುಮಾರ್, ವಿರಾಜಪೇಟೆ ತಾಲೂಕು ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ, ಮೈದಾನ ಸಮಿತಿ ಸಂಚಾಲಕ ಮಂಜು ಸುವರ್ಣ, ಆಹಾರ ಸಮಿತಿ ಸಂಚಾಲಕ ವಿ.ವಿ. ಅರುಣ್ ಕುಮಾರ್ ಗೌರವ ಉಪಸ್ಥಿತಿ ಇರಲಿದೆ ಎಂದು ತಿಳಿಸಿದರು.

ರಾಜ್ಯ ಸಮಿತಿ ಸದಸ್ಯೆ, ಶಿಸ್ತು ಸಮಿತಿ ಸಂಚಾಲಕಿ ಬಿ.ಆರ್. ಸವಿತಾ ರೈ ಮಾತನಾಡಿ, ಪಂದ್ಯಾವಳಿಯನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡಲು ಶ್ರಮಿಸಲಾಗುತ್ತಿದೆ.

ವಿವಿಧ ಉಪಸಮಿತಿಗಳು ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿವೆ. ಒಟ್ಟು 3 ಮೈದಾನದ 5 ಪಿಚ್‌ಗಳಲ್ಲಿ ಪಂದ್ಯಾಟ ನಡೆಯಲಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2026-27ನೇ ಸಾಲಿನ ಕಾರ್ಡ್ ಹೊಂದಿದ ಸದಸ್ಯರಿಗೆ ಮಾತ್ರ ಆಟವಾಡಲು ಅವಕಾಶವಿದ್ದು, ಸದಸ್ಯತ್ವ ಇಲ್ಲದ ಆಟಗಾರರನ್ನು ತಂಡದಲ್ಲಿ ಬಳಸಿಕೊಂಡಲ್ಲಿ ತಂಡವನ್ನೇ ಅನರ್ಹಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಶಿವಮೊಗ್ಗ, ಬಾಗಲಕೋಟೆ, ಹಾವೇರಿ, ಮಂಡ್ಯ, ಚಾಮರಾಜನಗರ, ತುಮಕೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಕೋಲಾರ, ಚಿತ್ರದುರ್ಗ, ಹಾಸನ, ರಾಮನಗರ, ಉಡುಪಿ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಮೈಸೂರು, ಕೊಪ್ಪಳ, ಬೀದರ್, ದಾವಣಗೆರೆ, ಗದಗ, ಬಳ್ಳಾರಿ, ಕೊಡಗು ಅರೇಬಿಕಾ, ಕೊಡಗು ರೋಬಸ್ಟಾ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ ಎಂದು ವಿವರಿಸಿದರು.

ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್ ಮಾತನಾಡಿ, ವಿಜೇತ ತಂಡಕ್ಕೆ ರೂ. 1 ಲಕ್ಷ, ರನ್ನರ್ ಅಪ್ ತಂಡಕ್ಕೆ ರೂ. 50 ಸಾವಿರ, ತೃತೀಯ 25 ಸಾವಿರ ಹಾಗೂ ನಾಲ್ಕನೇ ಸ್ಥಾನ ಪಡೆಯುವ ತಂಡಕ್ಕೆ ರೂ. 15 ಸಾವಿರ ನಗದು ಬಹುಮಾನ ಇರಲಿದೆ. ಇದರೊಂದಿಗೆ ಆಕರ್ಷಕ ಟ್ರೋಫಿಯನ್ನು ನೀಡಲಾಗುವುದು. ಆಗಮಿಸುವ ಎಲ್ಲಾ ಪತ್ರಕರ್ತರಿಗೆ ವಾಸ್ತವ್ಯದೊಂದಿಗೆ ಊಟೋಪಚಾರದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ, ಮೈದಾನ ಸಮಿತಿ ಸಂಚಾಲಕ ಮಂಜು ಸುವರ್ಣ ಉಪಸ್ಥಿತರಿದ್ದರು.

Share this article

ಟಾಪ್ ನ್ಯೂಸ್

More News