Breaking News :

ನ.8, ಹಾಗೂ 9ರಂದು ಬಳಂಜಿಕೆರೆಯ ಐದ್ರೋಡಮ್ಮ ಮಹೋತ್ಸವ 


ಜನವಾಹಿನಿ ನ್ಯೂಸ್ ಸಿದ್ದಾಪುರ : ಅರೆಕಾಡು ಗ್ರಾಮದ ಶ್ರೀ ಚಾಮುಂಡೇಶ್ವರಿ ಐದ್ರೋಡಮ್ಮ ದೇವಾಲಯದ ವಾರ್ಷಿಕೋತ್ಸವ ನ. 8 ಹಾಗೂ 9ರಂದು ಅತ್ಯಂತ ಶ್ರದ್ಧಾ ಭಕ್ತಿ ಹಾಗೂ ವಿಜೃಂಭಣೆಯಿಂದ ನಡೆಯಲಿದೆ.

ಪ್ರತಿ ವರ್ಷ ದೀಪಾವಳಿ ಹಬ್ಬದ ಸಂದರ್ಭ ಇಲ್ಲಿನ ದೇವಿಯ ವಾರ್ಷಿಕ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ದೇವಿಗೆ ವಿಶೇಷ ಪೂಜೆ, ಹೋಮ-ಹವನಗಳು ಜರುಗುತ್ತವೆ.

ವಾರ್ಷಿಕ ಜಾತ್ರೋತ್ಸವದ ಸಮಯದಲ್ಲಿ ಜಿಲ್ಲೆಯಾದ್ಯಂತ ಹಾಗೂ ಹೊರ ಜಿಲ್ಲೆಗಳಿಂದ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದು ಪುನೀತರಾಗಲು ಇಲ್ಲಿಗೆ ಹರಿದು ಬರುತ್ತಾರೆ.

ಈ ಬಾರಿ ನ. 8ರ ಭಾನುವಾರ ಸಂಜೆ 5.30ರಿಂದ 7.30 ಗಂಟೆಯವರೆಗೆ ವಿಶೇಷ ಪೂಜೆ ನಡೆಯಲಿದೆ. ನ. 9ರಂದು ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಪೂಜೆ, ತೀರ್ಥಪ್ರಸಾದ ನಡೆಯಲಿದ್ದು, ಬಳಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳುವಂತೆ ಆಡಳಿತ ಮಂಡಳಿ ಮನವಿ ಮಾಡಿದೆ.

Share this article

ಟಾಪ್ ನ್ಯೂಸ್

More News