Breaking News :

ಉಡುಪಿ; ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಡುಪಿ: ಪಿಯುಸಿ ವಿಧ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಿರಿಯಡ್ಕದಲ್ಲಿ ನಡೆದಿದೆ.

ಮೃತ ವಿಧ್ಯಾರ್ಥಿನಿಯನ್ನು ಪೆರ್ಡೂರು ಪ್ರಥಮ ದರ್ಜೆ ಸರಕಾರಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಹಿರಿಯಡ್ಕ ನಿವಾಸಿ ನಯನಾ(17) ಎಂದು ಗುರುತಿಸಲಾಗಿದೆ.

ಸೋಮವಾರ ಬೆಳಗ್ಗೆ ತನ್ನ ಮನೆಯಲ್ಲಿ ಒಬ್ಬಂಟಿ ಇದ್ದಾಗ ಯುವತಿ ಈ ಕೃತ್ಯ ಎಸಗಿದ್ದಾಳೆ. ಆಕೆಯ ತಾಯಿ ಶೋಭಾ ಈ ಬಗ್ಗೆ ಹಿರಿಯಡ್ಕ ಠಾಣೆಗೆ ದೂರು ನೀಡಿದ್ದಾರೆ.

ನಯನಾ ತನ್ನದೇ ಚೂಡಿದಾರ್ ಶಾಲನ್ನು ಬಳಸಿ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾಳೆ. ಘಟನೆಗೆ ಕಾರಣ ಏನೆಂದು ತಿಳಿದುಬಂದಿಲ್ಲ.

ಈ ಬಗ್ಗೆ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Share this article

ಟಾಪ್ ನ್ಯೂಸ್

More News