Breaking News :

ಬಜ್ಪೆ; ವಿಮಾನದಲ್ಲಿ ಸಿಗರೇಟು ಸೇದಿದ ಯುವಕ; ಪ್ರಕರಣ ದಾಖಲು

ಮಂಗಳೂರು: ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ವಿಮಾನದಲ್ಲಿ ಸಿಗರೇಟ್ ಸೇದಿದ ಆರೋಪದ ಮೇಲೆ ಪ್ರಯಾಣಿಕನೋರ್ವನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಜೇಶ್ವರ ನಿವಾಸಿ ಮುಶಾದಿಕ್ ಹುಸೇನ್ (24) ಎಂಬಾತನ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಗಸ್ಟ್ 31ರ ಸಂಜೆ ಅಬುದಾಬಿಯಿಂದ ಇಂಡಿಗೋ ವಿಮಾನದ ಮೂಲಕ ಮುಶಾದಿಕ್ ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುವ ಮುನ್ನವೇ ಮುಷಾದಿಕ್ ವಿಮಾನದ ವಾಶ್ ರೂಂನಲ್ಲಿ ಸಿಗರೇಟ್ ಸೇದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ವಿಮಾನದ ಅಧಿಕಾರಿಗಳು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Share this article

ಟಾಪ್ ನ್ಯೂಸ್

More News