ಬಾಂಗ್ಲಾದೇಶದಲ್ಲಿ ಸರ್ಕಾರ ವಿರೋಧಿ ಹೋರಾಟ ಹಿಂಸಾರೂಪಕ್ಕೆ ತಿರುಗಿದ್ದು, ಲಕ್ಷಾಂತರ ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಮಧ್ಯೆ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ.
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಸೋಮವಾರ ಮಿಲಿಟರಿ ಹೆಲಿಕಾಪ್ಟರ್‌ನಲ್ಲಿ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ಹಿಂಸಾತ್ಮಕ ಘರ್ಷಣೆಗಳಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪಿದ್ದಾರೆ. ಮತ್ತು ನೂರಾರು ಜನ ಗಾಯಗೊಂಡಿದ್ದಾರೆ. ಇದರ ನಡುವೆ ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲು ಸಿದ್ಧರಾಗಿದ್ದಾರೆ. ರಾಷ್ಟ್ರವ್ಯಾಪಿ ಕರ್ಫ್ಯೂ ವಿರೋಧಿಸಿ ನೂರಾರು ವಿದ್ಯಾರ್ಥಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಂತೆಯೇ ಈ ಘೋಷಣೆ ಹೊರಬಿದ್ದಿದೆ.
ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ಹಲವು ದಿನಗಳ ಹಿಂದೆ ನಡೆದ ಹಿಂಸಾಚಾರದಲ್ಲಿ ನೂರಾರು ಜನ ಮೃತಪಟ್ಟ ಬೆನ್ನಲ್ಲೇ ಮತ್ತೊಂದು ಹಿಂಸಾಚಾರ ಭುಗಿಲೆದ್ದಿದೆ. ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಹಿಂಸಾರೂಪ ತಾಳಿದ್ದು, ಮೃತರ ಸಂಖ್ಯೆ 98ಕ್ಕೆ ತಲುಪಿದೆ. ಈ ಪೈಕಿ 14 ಮಂದಿ ಪೊಲೀಸರು ಅಸುನೀಗಿದ್ದು, ಬಾಂಗ್ಲಾದೇಶಕ್ಕೆ ತೆರಳದಂತೆ ಭಾರತೀಯರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.







